News Karnataka Kannada
Monday, May 20 2024
ಕರಾವಳಿ

ಬಂಟ್ವಾಳ ಸರ್ಕಾರಿ ಆಸ್ಪತ್ರೆ ಸಕಲ ಸೌಲಭ್ಯಗಳೊಂದಿಗೆ ಕಾರ್ಯಾಚರಣೆ: ರಾಜೇಶ್ ನಾಯ್ಕ್

Photo Credit :

ಬಂಟ್ವಾಳ ಸರ್ಕಾರಿ ಆಸ್ಪತ್ರೆ ಸಕಲ ಸೌಲಭ್ಯಗಳೊಂದಿಗೆ ಕಾರ್ಯಾಚರಣೆ: ರಾಜೇಶ್ ನಾಯ್ಕ್

ಬಂಟ್ವಾಳ: ತಾಲೂಕಿನ ಕೇಂದ್ರಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಕಾರ್ಯ ನಡೆಸಿದ್ದು, ಇದೀಗ ಸುಸಜ್ಜಿತ ಆಸ್ಪತ್ರೆಯಾಗಿ ಮಾರ್ಪಟ್ಟಿದೆ. ಖಾಲಿ ಹುದ್ದೆಗಳು ಭರ್ತಿಯಾಗಿದ್ದು ತಜ್ಞ ವೈದ್ಯರೊಂದಿಗೆ ಸಕಲ ಸೌಕರ್ಯ ಜೊತೆ ಬಂಟ್ವಾಳ ಸರ್ಕಾರಿ ಆಸ್ಪತ್ರೆ ಕಾರ್ಯಾಚರಿಸುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಅಪರಾಹ್ನ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತಾನು ಶಾಸಕನಾದ ಬಳಿಕದ ಕಳೆದ 2 ವರ್ಷಗಳಲ್ಲಿ ಈ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗಿದೆ. ಇದರ ಫಲವಾಗಿಯೇ ಪ್ರಸ್ತುತ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇದ್ದ ಎಲ್ಲಾ ತಜ್ಞ ವೈದ್ಯರು ಹುದ್ದೆಗಳನ್ನು ತುಂಬಲಾಗಿದ್ದು, ಪ್ರಸ್ತುತ ಇವರು ರೋಗಿಗಳ ಚಿಕಿತ್ಸೆ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ ಎಂದರು.

ಬಂಟ್ವಾಳ ಸರ್ಕಾರಿ ಆಸ್ಪತ್ರೆ ರಾಜ್ಯಮಟ್ಟದಲ್ಲಿ 3ನೇ ಸ್ಥಾನ ಪಡೆದಿರುವ ತಾಲೂಕು ಆಸ್ಪತ್ರೆಯಾಗಿದ್ದು, ಯಾವುದೇ ಖಾಸಗಿ ಆಸ್ಪತ್ರೆಗೂ ಕಮ್ಮಿ ಇಲ್ಲದಂತೆ ಕಾರ್ಯಾಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ತಜ್ಞ ವೈದ್ಯರಿಂದ ರೋಗಿಗಳಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡಬೇಕಾಗಿದೆ. ಕೆಲವೊಂದು ಅಧುನಿಕ ವೈದ್ಯಕೀಯ ಉಪಕರಣಗಳ ಅವಶ್ಯಕತೆಗಳು ಕಂಡು ಬಂದಾಗ ಸರಕಾರದ ಅನುದಾನದಡಿ, ವಿವಿಧ ಸಂಘ ಸಂಸ್ಥೆಗಳ, ದಾನಿಗಳ ಸಹಕಾರದಿಂದ ವಿವಿಧ ವೈದ್ಯಕೀಯ ಉಪಕರಣಗಳನ್ನು ಮತ್ತು ಇತರೆ ಸೌಲಭ್ಯಗಳನ್ನು ಈ ಆಸ್ಪತ್ರೆಗೆ ಕಳೆದ 2 ವರ್ಷಗಳಲ್ಲಿ ನೀಡಲಾಗಿದೆ.  ಈಗಾಗಲೇ ಎಂ.ಆರ್.ಪಿ.ಎಲ್ ಸಂಸ್ಥೆಯವರು ಆಸ್ಪತ್ರೆ ನೀಡಿರುವ ಒಂದು ಸುಸಜ್ಜ್ಜಿತ ಅಂಬ್ಯಲೆನ್ಸ್ ಕಾರ್ಯನಿರ್ವಹಿಸುತ್ತಿದೆ. ಕ್ಯಾಡ್ ಸಂಸ್ಥೆಯವರು 5 ಇ.ಸಿ.ಜಿ. ಉಪಕರಗಳನ್ನು ನೀಡಿ ಸಹಕರಿಸಿರುತ್ತಾರೆ. ಮೃತದೇಹಗಳನ್ನು ಇಡಲು ಅನುಕೂಲವಾಗುವಂತೆ 2 ಶೈತ್ಯಾಗಾರಗಳನ್ನು ಲಯನ್ಸ್ ಕ್ಲಬ್ನವರು ಮಂದಿನ ತಿಂಗಳು ನವಂಬರ್ನಲ್ಲಿ ಆಸ್ಪತ್ರೆಗೆ ನೀಡಲಿದ್ದಾರೆ ಎಂದು ಅವರು ವಿವರಗಳನ್ನು ನೀಡಿದರು.

ಈ ರೀತಿಯಲ್ಲಿ ಕಳೆದ 2 ವರ್ಷಗಳಲ್ಲಿ ಆಸ್ಪತ್ರೆಯಲ್ಲಿ ಮಾಡಲಾದ ವಿವಿಧ ರೀತಿಯ ಸೌಕರ್ಯಗಳ ಅಭಿವೃದ್ಧಿ ಫಲವಾಗಿ ಪ್ರಸ್ತುತ ಅಂದಾಜು 800 ಹೊರ ರೋಗಿಗಳಾಗಿ ಪ್ರತಿದಿನ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಖಾಸಗೀ ಆಸ್ಪತ್ರೆಗೆ ಕಮ್ಮಿ ಇಲ್ಲದಂತೆ ಚಿಕಿತ್ಸೆಯನ್ನು ಸಾರ್ವಜನಿಕರಿಗೆ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಶಾಸಕರು ಹೇಳಿದರು.

ಪುಂಜಾಲಕಟ್ಟೆ ಮೇಲ್ದರ್ಜೆಗೆ: ಆಸ್ಪತ್ರೆಗಳ ಆಧುನೀಕರಣಕ್ಕೆ ಸಂಬಂಧಿಸಿದಂತೆ ಬಹುದಿನಗಳ ಬೇಡಿಕೆಯಾಗಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಕುರಿತಂತೆ ಅ.15ರಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿಯಾಗಿ ಮನವಿ ನೀಡಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿರುತ್ತಾರೆ. ಇದರ ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರ ಸಿಬ್ಬಂದಿಗಳನ್ನು ಭರ್ತಿ ಮಾಡುವ ಕುರಿತಂತೆ ಸಚಿವರೊಂದಿಗೆ ಚರ್ಚಿಸಿದ್ದು, ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡುತ್ತಾರೆ ಎಂದವರು ಮಾಹಿತಿ ನೀಡಿದರು.

ಡಿಜಿಟಲ್ ಎಕ್ಸ್ ರೇ ಟಿ ಎಲ್ ಡಿ ಬ್ಯಾಡ್ಜ್, ಅಲ್ಟ್ರಾ ಸೌಂಡ್ ಮೆಶಿನ್, ಇಎನ್ ಟಿ ವರ್ಕ್ ಸ್ಟೇಶನ್, ದಂತ ವೈದ್ಯಕೀಯ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ಸೋಲಾರ್ ಪ್ಲಾಂಟ್, ನವಜಾತ ಶಿಶುಗಳಿಗೆ ವ್ಯವಸ್ಥೆ, ಸಿಸಿ ಕ್ಯಾಮರಾ, ಕೋವಿಡ್ ಟೆಸ್ಟ್ ಗೆ ಆಧುನಿಕ ವ್ಯವಸ್ಥೆ, ಇಸಿಜಿ, ಐದು ವೆಂಟಿಲೇಟರ್ ಗಳನ್ನು ಕಳೆದ ಎರಡು ವರ್ಷಗಳಲ್ಲಿ ಒದಗಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪುಷ್ಪಲತಾ ಮಾಹಿತಿ ನೀಡಿದರು.

ತಾಲೂಕಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ವೈದ್ಯಾಧಿಕಾರಿಗಳಿದ್ದು, ಹೆಚ್ಚುವರಿ ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಸಹಾಯಕ ವೈದ್ಯಾಧಿಕಾರಿ ಅನಿತಾ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು