ಕಾಸರಗೋಡು: ಬಸ್ಸು ಮತ್ತು ಆಟೋ ರಿಕ್ಷಾ ಡಿಕ್ಕಿ ಹೊಡೆದು ಆಟೋ ಚಾಲಕ ಮೃತಪಟ್ಟ ಘಟನೆ ಕೋಳಿಚ್ಚಾಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ನೆಲ್ಲಿತ್ತಾಡ್ ನ ರಜಿನ್ (27) ಎಂದು ಗುರುತಿಸಲಾಗಿದೆ. ಕಾಞ೦ಗಾಡ್ ನಿಂದ ಪಾಣತ್ತೂರಿಗೆ ಬರುತ್ತಿದ್ದ ಬಸ್ಸು ಮತ್ತು ಎದುರಿನಿಂದ ಆಟೋ ರಿಕ್ಷಾ ನಡುವೆ ಅಪಘಾತ ನಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ರಜಿನ್ ರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಹೊಸದುರ್ಗ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.