News Karnataka Kannada
Wednesday, May 01 2024
ಕರಾವಳಿ

ಬಸ್‌ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ

Child
Photo Credit :

ಕಾರವಾರ: ಬಸ್ ನಿಲ್ದಾಣದಲ್ಲಿರಿಸಿದ್ದ ಚೀಲದಲ್ಲಿ ನವಜಾತಶಿಶು ಸಿಕ್ಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗೌಡಳ್ಳಿ ಸಮೀಪದ ಖಾನ್ ನಗರದ ಬಸ್ ತಂಗುದಾಣದಲ್ಲಿ ನಡೆದಿದೆ.
ತಾಲೂಕಿನ ಕೂಗಿಲಕುಳಿ ಗ್ರಾಮದ ಮಾದೇವಿ ಎಂಬವರಿಗೆ ಈ ಮಗು ದೊರೆತಿದೆ. ಸದ್ಯ ಈ ಮಗುವನ್ನು ಶಿರಸಿಯ ಸಹಾಯ ಟ್ರಸ್ಟ್ ಗೆ ಹಸ್ತಾಂತರಿಸಿದ್ದಾರೆ. ಟ್ರಸ್ಟ್ ಅಧ್ಯಕ್ಷ ಸತೀಶ್ ಶೆಟ್ಟಿ ಅನಾರೋಗ್ಯಕ್ಕೆ ತುತ್ತಾಗಿರುವ ಮಗುವನ್ನು ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮಕ್ಕಳ ತುರ್ತು ನಿಗಾ ಘಟಕದಲ್ಲಿರಿಸಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಾದೇವಿ ಅವರು ಪ್ರತಿದಿನ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಎಂದಿನಂತೆ ಇಂದು ನಿಲ್ದಾಣಕ್ಕೆ ಬಂದಾಗ ಚೀಲ ಪತ್ತೆಯಾಗಿದೆ. ಯಾರೋ ಮರೆತು ಹೋಗಿರಬೇಕು ಎಂದು ಆ ಚೀಲವನ್ನು ಮನೆಗೆ ತಂದು ನೋಡಿದ್ದಾರೆ. ಈ ವೇಳೆ ಚೀಲ ಬಿಚ್ಚುತ್ತಿದ್ದಂತೆ ಮಗು ಅಳುವುದು ಕೇಳಿಸಿದೆ. ಭಯಗೊಂಡ ಮಾದೇವಿ ಸ್ಥಳೀಯರಿಗೆ ಮಾಹಿತಿ ನೀಡಿ ನಂತರ ಪೊಲೀಸರಿಗೂ ವಿಷಯ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು