News Karnataka Kannada
Thursday, May 02 2024
ಕರಾವಳಿ

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಚಂದ್ರ ಹೆಮ್ಮಾಡಿಗೆ 15 ದಿನಗಳ ನ್ಯಾಯಾಂಗ ಬಂಧನ

Photo Credit :

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಚಂದ್ರ ಹೆಮ್ಮಾಡಿಗೆ 15 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಗೆ ನ್ಯಾಯಾಲಯ 15 ದಿನಗಳ ಬಂಧನ ವಿಧಿಸಲಾಗಿದೆ.

ರಾಜ್ಯಮಟ್ಟದ ಪತ್ರಿಕೆಯ ಬಿಡಿ ವರದಿಗಾರನಾಗಿರುವ ಆರೋಪಿ ಹೆಮ್ಮಾಡಿ ಮೇಲೆ ಇದುವರೆಗೆ 21 ಪೋಕ್ಸೊ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿದ್ದು, ಇದು ರಾಜ್ಯದಲ್ಲೇ ದಾಖಲೆಯಾಗಿದೆ.

ಕುಂದಾಪುರ ತಾಲೂಕಿನ ಹೆಮ್ಮಾಡಿಯ ಚಂದ್ರ ಕೆ.ಹೆಮ್ಮಾಡಿ(40) ಪತ್ರಕರ್ತನಾಗಿ ಶಾಲಾ ಸಮಾರಂಭಗಳಿಗೆ ವರದಿ ಮಾಡಲು ತೆರಳುತ್ತಿದ್ದ ವೇಳೆ ಬಾಲಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ನಂತರ ಬಾಲಕರ ಜತೆ ಆತ್ಮೀಯವಾಗಿ ಬೆರೆತು, ವಿಶ್ವಾಸ ಗಳಿಸಿ ಮಕ್ಕಳಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬಲವಂತವಾಗಿ ಅವರ ಮೇಲೆ ದೌರ್ಜನ್ಯ ಎಸಗುತ್ತಿದ್ದ. ಬಳಿಕ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೀಗೆ ಹಲವು ವರ್ಷಗಳಿಂದ ಆರೋಪಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪ್ರಕರಣದ ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಬೈಂದೂರಿನಲ್ಲಿ ಬಾಲಕನೊಬ್ಬ ಮಾನಸಿಕ ಆಘಾತಕ್ಕೊಳಗಾಗಿದ್ದ. ಪೋಷಕರು ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವ ವಿಚಾರ ಬಯಲಾಗಿತ್ತು. ತಕ್ಷಣ ಪೋಷಕರು ಪೊಲೀಸರಿಗೆ ವಿಷಯ ತಿಳಿಸಿದರು.

ಘಟನೆಯ ಸಂಪೂರ್ಣ ಮಾಹಿತಿ ಪಡೆದು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಆರೋಪಿ ಚಂದ್ರ ಕೆ. ಹೆಮ್ಮಾಡಿಯ ಲೈಂಗಿಕ ದೌರ್ಜನ್ಯ ಪ್ರಕರಣಗಳು ಒಂದೊಂದೆ ಹೊರಗಡೆ ಬರುತ್ತಿದೆ.

ಈವರೆಗೆ ಚಂದ್ರ ಕೆ. ಹೆಮ್ಮಾಡಿ ಮೇಲೆ 21 ಪೋಕ್ಸೊ ಪ್ರಕರಣ ದಾಖಲಾಗಿದ್ದು, ಇದು ರಾಜ್ಯದಲ್ಲೇ ದಾಖಲೆ ಎಂದು ಹೇಳಲಾಗುತ್ತಿದೆ. ಒಬ್ಬ ವ್ಯಕ್ತಿಯ ಮೇಲೆ ಇಷ್ಟು ಪೋಕ್ಸೋ ಪ್ರಕರಣ ದಾಖಲಾಗಿದ್ದು ಇದೇ ಮೊದಲ ಬಾರಿಗೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
192
Shreyas Vittal

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು