Categories: ಕರಾವಳಿ

ಬಾಲ್ಯ ವಿವಾಹ ತಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ

ಕಾರವಾರ: ಅಪ್ರಾಪ್ತ ಬಾಲಕಿಗೆ 21 ವರ್ಷದ ಯುವಕನೊಂದಿಗೆ ವಿವಾಹ ಮಾಡಲು ಯತ್ನಿಸಿದ್ದ ಪೋಷಕರನ್ನು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಸೋಮವಾರ ತಡೆದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹೆಸ್ಕಾಂ ಸಮೀಪದ ಜಾಮಿಯಾ ಮಸೀದಿಯ ಬಳಿ ಬಾಲ್ಯ ವಿವಾಹಕ್ಕೆ ಯತ್ನ ನಡೆಯುತ್ತಿದೆಯೆಂಬ ಮಾಹಿತಿಯ ಮೇರೆಗೆ ಆಗಮಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಪದ್ಮಾ ಪಾಟೀಲ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.

ಈ ವೇಳೆ ಬಾಲಕಿಯ ತಾಯಿ ಹಾಗೂ ಬಾಲಕನ ಚಿಕ್ಕಪ್ಪ ಅಪ್ರಾಪ್ತರಿಗೆ ಮದುವೆ ಮಾಡಿಸುವುದಕ್ಕಾಗಿ ಮಸೀದಿಯ ಜಮಾತ್ ಸಮಿತಿಯೊಂದಿಗೆ ಮಾತುಕತೆ ನಡೆಸುತ್ತಿದ್ದರು. ಅದನ್ನು ತಡೆದು, ಪ್ರಕರಣವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವರ್ಗಾಯಿಸಿದೆವು ಎಂದು ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಸುಜಾತ ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಪದ್ಮಾ ಪಾಟೀಲ್, ಶಿರವಾಡದ ಜಮಾತ್‌ನಲ್ಲಿ ಬಾಲ್ಯ ವಿವಾಹ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಅಲ್ಲಿಗೆ ತೆರಳಿದ್ದೆವು. ಆದರೆ ಅಲ್ಲಿಂದ ಅದನ್ನು ಜಾಮಿಯ ಮಸೀದಿಯ ಕಾರವಾರ ಜಮಾತ್‌ಗೆ ವರ್ಗಾಯಿಸಿದ್ದರು. ಅಲ್ಲಿಗೆ ತೆರಳಿದಾಗ ಅಪ್ರಾಪ್ತರ ಪೋಷಕರು ಬಾಲ್ಯ ವಿವಾಹದ ಕುರಿತಾಗಿ ಮಾತುಕತೆ ನಡೆಸುತ್ತಿದ್ದರು ಎಂದು ತಿಳಿಸಿದರು.

ಅವರೆಲ್ಲರನ್ನೂ ತಡೆದು, ಜಮಾತ್ ಸಮಿತಿಯ ಪದಾಧಿಕಾರಿಗಳು, ಅಪ್ರಾಪ್ತಳು ಹಾಗೂ ಅವರ ಪಾಲಕ, ಪೋಷಕರಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ. ವಿವಾಹಕ್ಕಿರುವ ವಯಸ್ಸನ್ನು ಮೀರಿ ಅವರಿಗೆ ಮದುವೆ ಮಾಡಿಸದಂತೆ ಎಚ್ಚರಿಕೆ ನೀಡಲಾಗಿದೆ. ಬಾಲಕಿಯನ್ನು ಆಕೆಯ ಮನೆಗೆ ಕಳುಹಿಸಲಾಗಿದೆ.

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago