News Karnataka Kannada
Tuesday, April 30 2024
ಬೆಂಗಳೂರು

ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಕೈಬಿಡಲು ಗೃಹ ಸಚಿವರಿಗೆ ಕೋಟ ಮನವಿ

Kota Araga 10082021
Photo Credit :

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದುರುದ್ದೇಶಪೂರ್ವಕವಾಗಿ ದಾಖಲಿಸಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಗೃಹ ಸಚಿವರನ್ನು ಭೇಟಿಮಾಡಿ ಈ ಸಂಬಂಧ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಿದರು.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸೇರಿಕೊಂಡು ದುರುದ್ದೇಶಪೂರ್ವಕವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಅಂತಹ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಕಾರ್ಯಕರ್ತರು ಮನವಿ ಸಲ್ಲಿಸಿರುತ್ತಾರೆ. ಈ ಕಾರಣದಿಂದ ರಾಜ್ಯದ ವಿವಿಧೆಡೆ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ..

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು