Categories: ಕರಾವಳಿ

ಬಿಜೆಪಿ ಪರ ಜನತೆಯ ವಿಶ್ವಾಸ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಸಂತಸ

 

ಮಂಗಳೂರು : ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಸಾಬೀತು ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದ ಮೇಲೆ ವಿಶ್ವಾಸ ಇರಿಸಿದ ಜನತೆ ಬಿಜೆಪಿಗೆ ಅಭೂತಪೂರ್ವ ಗೆಲುವು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದಲ್ಲಿ ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಪಾರಮ್ಯ ಮೆರೆದಿತ್ತು. ಈ ಬಾರಿ ಮಸ್ಕಿ ಕ್ಷೇತ್ರದಲ್ಲಿ ಮಾತ್ರ ಪಕ್ಷಕ್ಕೆ ಹಿನ್ನಡೆಯಾಗಿದೆ. ಬೆಳಗಾವಿ ಮತ್ತು ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಮಹತ್ವದ ಗೆಲುವು ದಾಖಲಿಸಿದೆ. ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳಿಗೆ ಉಪ ಚುನಾವಣೆಯಲ್ಲಿ ಮತದಾರರು ಮನ್ನಣೆ ನೀಡಿದ್ದು ಬಿಜೆಪಿ ಗೆಲುವಿಗೆ ಪೂರಕವಾಗಿದೆ. ಈ ಫಲಿತಾಂಶದಿಂದ ರಾಜ್ಯದಲ್ಲಿ ಬಿಜೆಪಿಯ ಸಂಘಟನೆ ಇನ್ನಷ್ಟು ಬಲವರ್ಧನೆಯಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಕಾಂಗ್ರೆಸ್ ಪಕ್ಷವನ್ನು 5 ರಾಜ್ಯಗಳಲ್ಲೂ ಜನತೆ ತಿರಸ್ಕರಿಸಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ನಳಿನ್‍ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Indresh KC

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

27 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

29 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

53 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago