ಕಾಸರಗೋಡು: ಮಂಜೇಶ್ವರ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಗೆ ಪರಿಹಾರವಾಗುತ್ತಿದೆ. ಹೊರಗಿನಿಂದ ವಿದ್ಯುತ್ ಸಂಪರ್ಕ ಮೊಟಕುಗೊಂಡರೂ ಮಂಜೇಶ್ವರ ಸಬ್ ಸ್ಟೇಷನ್ ವ್ಯಾಪ್ತಿಯ ಗ್ರಾಹಕರಿಗೆ ಸಮಸ್ಯೆಯಾಗದು.
ಸಬ್ ಸ್ಟೇಷನ್ ನಲ್ಲಿ ಸೋಲಾರ್ ವಿದ್ಯುತ್ ಘಟಕ ಆರಂಭಿಸಲಾಗುತ್ತಿದೆ. ಕಾಮಗಾರಿ ಭರದಿಂದ ಸಾಗುತ್ತಿದೆ. ಎರಡು ತಿಂಗಳೊಳಗೆ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಕೋಟ್ಯಾoತರ ರೂ. ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು , 500 ಕಿಲೋ ವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ.
ಬೆಂಗಳೂರಿನ ಖಾಸಗಿ ಕಂಪೆನಿ ಕಾಮಗಾರಿ ಕೈಗೆತ್ತಿಕೊಂಡಿದೆ. ಸೋಲಾರ್ ವಿದ್ಯುತ್ ಉತ್ಪಾದನೆ ಆರಂಭವಾಗುವುದರೊಂದಿಗೆ ಮಂಜೇಶ್ವರ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿದ್ಯುತ್ ಮೊಟಕುಗೊಳ್ಳದು. ಹೊರಗಿನಿಂದ ವಿದ್ಯುತ್ ಸ್ಥಗಿತಗೊಂಡಲ್ಲಿ ಸೋಲಾರ್ ವಿದ್ಯುತ್ ಸಂಪರ್ಕ ನೀಡಲಾಗುವುದು. ಇದರಿಂದ ಮಂಜೇಶ್ವರ ಸಬ್ ಸ್ಟೇಷನ್ ಹೊಸ ಮೈಲುಗಲ್ಲು ಸಾಧಿಸಿದಂತಾಗಿದೆ.