Categories: ಕರಾವಳಿ

ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು: ಸಚಿವ ಈಶ್ವರಪ್ಪ ಘೋಷಣೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 2 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.

ಗುರುವಾರ ಮಂಗಳೂರಿಗೆ  ಆಗಮಿಸಿದ ಸಚಿವರನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಭೇಟಿಯಾಗಿ ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃಧಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಸಂಘದ ಮನವಿಗೆ ಸ್ಪಂದಿಸಿದ ಸಚಿವರು ಸ್ಥಳದಲ್ಲೆ ಎರಡು ಕೋಟಿ ಅನುದಾನ ಮಂಜೂರು ಮಾಡಿ ಕ್ರಿಯಾ ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಪತ್ರಕರ್ತರ ನಿಯೋಗದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಆತ್ಮಭೂಷಣ್, ಭಾಸ್ಕರ ರೈ ಕಟ್ಟ ಮತ್ತು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಇದ್ದರು.

 

10 ಕೋಟಿ ರೂ. ಪ್ಯಾಕೆಜ್ ಬಿಡುಗಡೆಗೆ ಸಿಎಂಗೆ ಮನವಿ

ಇದೇ ಸಂದರ್ಭದಲ್ಲಿ ಪತ್ರಕರ್ತರ ಸಂಘದ ನಿಯೋಗ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕಂದಾಯ ಸಚಿವ ಆರ್.ಅಶೋಕ್‍ರನ್ನು ಭೇಟಿಯಾಗಿ ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 10 ಕೋಟಿ ರೂಗಳ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.

ಸಿಎಂ ಮತ್ತು ಕಂದಾಯ ಸಚಿವರು ಪತ್ರಕರ್ತರ ಮನವಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಮಡಪ್ಪಾಡಿಯಲ್ಲಿ ಕಳೆದ ಜನವರಿ 5 ರಂದು ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಗ್ರಾಮಸ್ಥರಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 10 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು.

 

Desk

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

7 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

7 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

8 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

8 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

9 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

9 hours ago