ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಹೀನಾಯವಾಗಿ ಸೋತಿರುವ ಸಚಿವ ರಮಾನಾಥ ರೈ ಅವರು ಮತಯಂತ್ರಗಳು ಸರಿಯಿರಲಿಲ್ಲವೆಂದು ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ಮತ್ತು ಮೂಡುಬಿದಿರೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸೋಲುಂಡಿದೆ.
ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರು ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ತಕರಾರು ಅರ್ಜಿ ಸಲ್ಲಿಸುವುದಾಗಿ ಹೇಳಿದರು.
ಬಂಟ್ವಾಳದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಅವರು ರಮಾನಾಥ ರೈ ವಿರುದ್ಧ 15971 ಮತಗಳ ಅಂತರದಿಂದ ಗೆಲುವು ದಾಖಲಿಸಿಕೊಂಡಿದ್ದಾರೆ.