Categories: ಕರಾವಳಿ

ಮರಳಿನ ಅಭಾವ ಶಾಸಕರ ನೇತೃತ್ವದಲ್ಲಿ ನಾಳೆ ಸುಳ್ಯದಲ್ಲಿ ಧರಣಿ ಸತ್ಯಾಗ್ರಹ

ಸುಳ್ಯ: ದ.ಕ.ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ತಲೆದೋರಿರುವ ತೀವ್ರ ಮರಳಿನ ಅಭಾವವನ್ನು ಪ್ರತಿಭಟಿಸಿ ನಾಳೆ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಶಾಸಕ ಎಸ್.ಅಂಗಾರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್.ಅಂಗಾರ ಕಳೆದ ಕೆಲವು ವರ್ಷಗಳಿಂದ ಕರಾವಳಿ ಜಿಲ್ಲೆಗಳಲ್ಲಿ ತಲೆದೋರಿರುವ ಮರಳಿನ ಅಭಾವದಿಂದ ಜನರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಅ.15ರಮೊದಲು ಸಮಸ್ಯೆ ಪರಿಹರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲದ ಕಾರಣ ಮುಖ್ಯಮಂತ್ರಿಗಳ ಭರವಸೆಗೇ ಬೆಲೆ ಇಲ್ಲದಂತಾಗಿದೆ. ವಿವಿಧ ಯೋಜನೆಗಳಲ್ಲಿ ಮಂಜೂರಾದ ಮನೆಗಳು, ಸರ್ಕಾರಿ, ಖಾಸಗೀ ಕಾಮಗಾರಿಗಳು ಮರಳಿನ ಅಭಾವದಿಂದ ಸ್ಥಗಿತಗೊಂಡಿದೆ. ಇದರಿಂದ ಕಟ್ಟಡ ಕಾರ್ಮಿಕರು, ಗುತ್ತಿಗೆದಾರರು, ಲಾರಿ ಮಾಲಕ-ಚಾಲಕರು ಕೆಲಸವಿಲ್ಲದೆ, ಸಾಲ ಕಟ್ಟಲಾಗದ ಮತ್ತು ಜೀವನ ನಿರ್ವಹಣೆ ಮಾಡಲಾಗದ ಸ್ಥಿತಿ ನಿರ್ಮಾಣಗೊಂಡಿದೆ. ಸರ್ಕಾರಿ ಮತ್ತು ಖಾಸಗಿ ನಿರ್ಮಾಣ ಕಾರ್ಯಗಳು, ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಈ ಅವೈಜ್ಞಾನಿಕ ಮತ್ತು ಅಸಂಪ್ರದಾಯಿಕ ಮರಳು ನೀತಿಯ ವಿರುದ್ಧ ನಾಳೆ ಬೆಳಿಗ್ಗೆ 10 ರಿಂದ ಸಂಜೆ ನಾಲ್ಕರ ತನಕ ಧರಣಿ ಸತ್ಯಾಗ್ರಹ ನಡೆಯಲಿದೆ. ಸತ್ಯಾಗ್ರಹದಲ್ಲಿ ಜನಪ್ರತಿನಿಧಿಗಳು, ವಸತಿ ಫಲಾನುಭವಿಗಳು, ಜನಸಾಮಾನ್ಯರು, ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮರಳು ನೀತಿಯನ್ನು ಸರಳೀಕರಣ ಮಾಡಿ:
ಬಿಜೆಪಿ ಸರ್ಕಾರದ ಸಂದರ್ಭದಲ್ಲಿ ಇದ್ದ ಮರಳು ನೀತಿಯನ್ನು ಮರುಸ್ಥಾಪನೆ ಮಾಡಬೇಕು. ಸ್ಥಳೀಯಾಗಿ ಮರಳು ರ್ಯಾಂಪ್‍ಗಳನ್ನು ಗುರುತಿಸಿ ಅದನ್ನು ಟೆಂಡರ್ ನಡೆಸಬೇಕು. ಹಿಂದೆ ಮರಳು ವಿತರಣೆ ಮಾಡಿ ಅನುಭವ ಇದ್ದವರಿಗೆ ಮತ್ತು ಸ್ಥಳೀಯರಿಗೆ ಗುತ್ತಿಗೆ ನೀಡಿ ಆಯಾ ಪ್ರದೇಶದಲ್ಲಿ ಸ್ಥಳೀಯವಾಗಿ ಜನರಿಗೆ ಮರಳು ಸರಬರಾಜು ಮಾಡಲು ಆದ್ಯತೆ ನೀಡಬೇಕು ಮತ್ತು ಮರಳು ನಿಯಮವನ್ನು ಸರಳೀಕರಣ ಮಾಡಬೇಕು ಎಂದು ಅವರು ಒತ್ತಾಯಿಸಿದರು. ವಸತಿ ಯೋಜನೆ ಫಲಾನುಭವಿಗಳಿಗೆ ಮರಳು ಇಲ್ಲದೆ ಮನೆಗಳನ್ನು ಪೂರ್ತಿ ಮಾಡಲು ಸಮಸ್ಯೆ ಎದುರಾಗಿರುವುದರ ಜೊತೆಗೆ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಪೂರ್ತಿಗೊಂಡ ಮನೆಗಳಿಗೂ ಹಣ ಬಿಡುಗಡೆಯಾಗುತ್ತಿಲ್ಲ. ಇದರಿಂದ ವಸತಿ ಯೋಜನೆಯ ಫಲಾನುಭವಿಗಳು ಸಮಸ್ಯೆಗೆ ಸಿಲುಕಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ, ಎ.ಪಿ.ಎಂ.ಸಿ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಹರೀಶ್ ರೈ ಉಬರಡ್ಕ ಉಪಸ್ಥಿತರಿದ್ದರು.

ಟಿಪ್ಪು ಜಯಂತಿ ಆಚರಣೆ ಕೈ ಬಿಡಲು ಬಿಜೆಪಿ ಒತ್ತಾಯ

ಸುಳ್ಯ: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಸರ್ಕಾರ ಕೈ ಬಿಡಬೇಕು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಆಗ್ರಹಿಸಿದ್ದಾರೆ. ಎಲ್ಲಡೆಯಿಂದ ವಿರೋಧ ಇರುವ ಹಿನ್ನಲೆಯಲ್ಲಿ ಟಿಪ್ಪು ಜಯಂತಿಯನ್ನು ಕೈ ಬಿಟ್ಟು ಅಬ್ದುಲ್ ಕಲಾಂ ಅವರ ಜಯಂತಿಯನ್ನು ನಡೆಸಿದರೆ ಬಿಜೆಪಿ ಅದಕ್ಕೆ ಸಹಕಾರ ನೀಡಲಿದೆ ಎಂದು ಅವರು ಹೇಳಿದರು.

ಅವೈಜ್ಞಾನಿಕ ಮತ್ತು ಅಸಂಪ್ರದಾಯಿಕ ಮರಳು ನೀತಿಯಿಂದಾಗಿ ಜನರು ರೋಷಿ ಹೋಗಿದ್ದಾರೆ. ಪ್ರಕೃತಿ ದತ್ತವಾಗಿ ದೊರೆಯುವ ಮರಳನ್ನು ಕೂಡ ಸಮರ್ಪಕವಾಗಿ ವಿತರಣೆ ಮಾಡಲು ಸಾಧ್ಯವಾಗದ ಸರ್ಕಾರದಿಂದ ಜನರಿಗೆ ಮತ್ತೆ ಏನು ಪ್ರಯೋಜನ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಸುಬ್ರಹ್ಮಣ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ಸಂಘರ್ಷ ಉಂಟಾದ ಘಟನೆಯ ಬಗ್ಗೆ ನೋವಿದೆ. ಸಮಸ್ಯೆಯನ್ನು ಬಗೆ ಹರಿಸಲು ಹಿರಿಯರು ಪ್ರಯತ್ನ ನಡೆಸುತ್ತಿದ್ದಾರೆ.

ಘರ್ಷಣೆ ವೈಯುಕ್ತಿಕ ಹಿನ್ನಲೆಯಲ್ಲಿ ಆಗಿದೆ ಘಟನೆಗೂ ಸಂಘಟನೆಗಳಿಗೂ ಸಂಬಂಧ ಇಲ್ಲ ಎಂದು ವೆಂಕಟ್ ವಳಲಂಬೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ, ಎ.ಪಿ.ಎಂ.ಸಿ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಹರೀಶ್ ರೈ ಉಬರಡ್ಕ ಉಪಸ್ಥಿತರಿದ್ದರು.

Desk

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

16 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

18 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

38 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

50 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

60 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago