Categories: ಕರಾವಳಿ

ಮಳೆಯ ಅಬ್ಬರಕ್ಕೆ ಕರಾವಳಿಯಲ್ಲಿ ಮೀನುಗಾರರಿಗೆ ಸುಗ್ಗಿ

ಕಾರವಾರ: ಮಳೆಗಾಲದ ಕಾರಣದಿಂದ ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ಬಿಡುವು ನೀಡಲಾಗಿತ್ತು. ಈಗ ಮೀನುಗಾರಿಕೆ ಪ್ರಾರಂಭವಾಗಿ ಮೂರು ದಿನಗಳು ಕಳೆದಿವೆ. ಕೊರೊನಾ ಕಾರಣದಿಂದಾಗಿ ಎರಡು ದಿನಗಳ ಕಾಲ ಮೀನುಗಾರರು ಮೀನುಗಾರಿಕೆಗೆ ಹೋಗಿರಲಿಲ್ಲ. ಆದರೆ ಅವರಿಗೆ ಶುಕ್ರವಾರ ಶುಕ್ರದೆಸೆ ಹೊಡೆದಿದೆ.
ಇಂದು ಕಾರವಾರದಲ್ಲಿ ಮೀನುಗಾರಿಕೆಗೆ ತೆರಳಿದ ಮೀನುಗಾರರಿಗೆ ಬೀಸಿದ ಬಲೆಗೆ ರಾಶಿ ರಾಶಿ ಮೀನುಗಳು ಬಂದು ಬೀಳುತ್ತಿವೆ. ಕಳೆದ ನಾಲ್ಕು ತಿಂಗಳಲ್ಲಿ ಸಮುದ್ರದಲ್ಲಿ ಆದ ಹವಾಮಾನ ಬದಲಾವಣೆ ಮೀನುಗಳ ಸಂತಾನೋತ್ಪತ್ತಿಗೆ ಹೆಚ್ಚು ಪೂರಕವಾಗಿತ್ತು. ಇದೀಗ ಮೀನುಗಳು ಯಥೇಚ್ಚವಾಗಿ ದೊರೆಯುತ್ತಿವೆ. ಲೋಡ್ ಗಟ್ಟಲೆ ಮೀನುಗಳು ಸಿಕ್ಕರೂ ಕೇರಳ, ಆಂಧ್ರ ಭಾಗದಲ್ಲಿ ಲಾಕ್‍ಡೌನ್ ಇರುವುದರಿಂದ ಉತ್ತಮ ಬೆಲೆ ಸಿಗದಂತಾಗಿದೆ.
ಬೆಳಗಿನಿಂದ ಬಿಡುವುಕೊಟ್ಟಿದ್ದ ಮಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಪ್ರಾರಂಭವಾಗಿದ್ದು, ಜಿಲ್ಲೆಯಾದ್ಯಂತ ಅಬ್ಬರದ ಮಳೆ ಸುರಿಯುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆ ಮಾಹಿತಿ ನೀಡಿ, ಇನ್ನೂ ಮೂರು ದಿನ ಹೆಚ್ಚಿನ ಮಳೆಯಾಗುತ್ತದೆ ಎಂದು ಸೂಚಿಸಿದೆ. ಮಳೆಯ ಹೆಚ್ಚಳದಿಂದ ಮೀನುಗಾರರಿಗೆ ಹೆಚ್ಚಿನ ಮೀನುಗಳು ಸಿಗುವ ನಿರೀಕ್ಷೆ ಇದೆ.

Indresh KC

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 min ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

17 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago