ಮಂಗಳೂರು: ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಕರ್ ಅವರು ಭಾನುವಾರ ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ನಿಯಂತ್ರಣ ತಪ್ಪಿ ಜಾರಿ ಬಿದಿದ್ದರು. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲವೆಂದು ನಿರ್ಲಕ್ಷ್ಯ ವಹಿಸಿದ್ದರು.
ಇದೀಗ ಮಾಮೂಲಿ ತಪಾಸಣೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ತಲೆಯ ಒಳಭಾಗಕ್ಕೆ ಏಟು ಬಿದ್ದಿರುವುದು ಬೆಳಕಿಗೆ ಬಂದಿದೆ. ಶಸ್ತ್ರ ಚಿಕಿತ್ಸೆ ಹಿನ್ನೆಲೆಯಲ್ಲಿ ಆಸ್ಕರ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಜೀ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರಿಗೆ ಆಸ್ಪತ್ರೆ ಐಸಿಯು ನಲ್ಲಿ ಚಿಕಿತ್ಸೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.