Categories: ಕರಾವಳಿ

ಮಾನಸಿಕ ಅಸ್ವಸ್ಥನ ಉಗ್ರ ವರ್ತನೆಯಿಂದ 7 ವರ್ಷದಿಂದ ಸೂರ್ಯನ ಬೆಳಕು ಕಾಣದ ತಾಯಿ ಮಗಳು..!!! ಗೃಹಬಂಧನಲ್ಲಿದ್ದ ಮೂವರ ರಕ್ಷಣೆ.

ಬ್ರಹ್ಮಾವರ ; ಮಾನಸಿಕ ಅಸ್ವಸ್ಥ ಮಗನ ಉಪಟಳ, ಮತ್ತು ಉಗ್ರ ವರ್ತನೆಯ ಭೀತಿಯಿಂದ ತಾಯಿ ಗುಲಾಬಿ ಶೆಟ್ಟಿ(80 ವ) ಹಾಗೂ ಮಗಳು ವಾರಿಜ ಶೆಟ್ಟಿ (50ವರ್ಷ) ಕಳೆದ ಏಳು ವರ್ಷಗಳಿಂದ ಹೊರಪ್ರಪಂಚದ ಬೆಳಕು ಕಾಣದೆ ಮನೆಯಲ್ಲಿ ವಿದ್ಯುತ್ ಸಂಪರ್ಕವೂ ಇಲ್ಲದೆ ಗೃಹಬಂಧನಲ್ಲಿ ಕತ್ತಲೆಯ ದಿನಗಳ ಕಳೆಯುತ್ತಿದ್ದರು. ಮೂವರನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯರ ಸಹಕಾರದಿಂದ ರಕ್ಷಿಸಿರುವ ಘಟನೆಯು ಶುಕ್ರವಾರ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ವಿಶು ಶೆಟ್ಟಿಯವರು ಮಾನಸಿಕ ಅಸ್ವಸ್ಥನನ್ನು ಚಿಕಿತ್ಸೆಗಾಗಿ ದೊಡ್ಡಣಗುಡ್ಡೆ ಡಾ ಎ ವಿ ಬಾಳಿಗ ಆಸ್ಪತ್ರೆಗೆ ದಾಖಲು ಪಡಿಸಿದ್ದು, ಚಿಕಿತ್ಸೆ ನೀಡಿ ತಾಯಿ ಮತ್ತು ಮಗಳಿಗೆ ನಿಟ್ಟೂರಿನಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರಿನಲ್ಲಿ ತಾತ್ಕಾಲಿಕ ಆಶ್ರಯ ಒದಗಿಸಿದ್ದಾರೆ. ರಕ್ಷಣೆ ಕಾರ್ಯಚರಣೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್ಐ ನಾರಾಯಣ ಮತ್ತು ಸಿಬ್ಬಂದಿಗಳು, ಪಂಚಾಯತ್ ಸದಸ್ಯ ದೀಪು, ಅಶೋಕ್ ಶೆಟ್ಟಿ, ಕಿಶೋರ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ಸಹಕರಿಸಿದ್ದರು.
ಮಾನಸಿಕ ಅಸ್ವಸ್ಥನ ಉಗ್ರ ವರ್ತನೆಯಿಂದ ಪರಿಸರದಲ್ಲಿಯೂ ಭಯದ ವಾತಾವರಣ ಸೃಷ್ಟಿಯಾಗಿತ್ತು. ರಾತ್ರಿಯ ಸಮಯದಲ್ಲಿ ವಿಕಾರವಾಗಿ ಬೊಬ್ಬಿಡುವುದು, ಮಂತ್ರ ಪಠಿಸುವಂತಹ ವಿಚಿತ್ರ ವರ್ತನೆಗಳು ಅಸ್ವಸ್ಥನಿಂದ ನಡೆಯುತ್ತಿದ್ದವು. ಮೂವರು ವಿದ್ಯುತ್ ಸಂಪರ್ಕ ಇಲ್ಲದ ಮನೆಯಲ್ಲಿ ವಾಸಿಸುತ್ತಿದ್ದರು. ಕಾರ್ಯಾಚರಣೆ ನಡೆಯುತ್ತಿರುವಾಗ, ಮನೋರೋಗಿಯು ಮನೆಯ ಬಾಗಿಲಿನ ಚಿಲಕ ಹಾಕಿಕೊಂಡಿದ್ದು ಬಾಗಿಲು ತೆರೆಯಲು ಚಿಲಕ ತುಂಡರಿಸಲಾಯಿತು. ಮನೋರೋಗಿಯ ತಾಯಿಗೆ ಪೌಷ್ಠಿಕ ಆಹಾರದ ಕೊರತೆಯಿಂದಾಗಿ ತೀವ್ರ ನಿತ್ರಾಣಗೊಂಡಿದ್ದರು. ಅವರನ್ನು ಹೊತ್ತುಕೊಂಡು ವಾಹನದೆಡೆಗೆ ಸಾಗಿಸಲಾಯಿತು. ಪರಊರಿನಲ್ಲಿರುವ ಸಂಬಂಧಿಯೋರ್ವರು ಇವರಿಗೆ ದಿನಸಿ ಸಾಮಾಗ್ರಿಗಳನ್ನು ಒದಗಿಸುತ್ತಿದ್ದರು. ಆದರೆ ಅದನ್ನು ಕೂಡಾ ಸರಿಯಾಗಿ ಬಳಸಲು ಅವರಿಗೆ ಸಾಧ್ಯವಾಗುತ್ತಿರಲಿಲ್ಲ.

 

Indresh KC

Recent Posts

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

17 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

34 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

39 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

1 hour ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

1 hour ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

2 hours ago