Categories: ಕರಾವಳಿ

ಮಾಸ್ಕ್ ಧರಿಸದವರಿಗೆ ದಂಡದ ಬಿಸಿ

ಸುಳ್ಯ: ಕೊರೋನಾ ಹರಡುವಿಕೆ ತಡೆಯಲು ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಪೊಲೀಸ್ ಮತ್ತು ನಗರ ಪಂಚಾಯಿತಿ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಟ ನಡೆಸುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗಿದೆ.  ಪೊಲೀಸರು ಮತ್ತು ನಗರ ಪಂಚಾಯಿತಿ ಅಧಿಕಾರಿಗಳು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲು ಆರಂಭಿಸಿದ್ದಾರೆ. ಮಾಸ್ಕ್ ಧರಿಸದೇ ಇದ್ದಲ್ಲಿ ನಗರ ಪ್ರದೇಶದಲ್ಲಿ 200 ರೂ. ಮತ್ತು ಗ್ರಾಮಾಂತರ ಪ್ರದೇಶದಲ್ಲಿ 100 ರೂ. ದಂಡ ವಿಧಿಸಲಾಗುತ್ತದೆ.

ಅಂಗಡಿ ಮಾಲಕರಿಗೂ ಖಡಕ್ ನಿರ್ದೇಶನ ನೀಡಲಾಗಿದ್ದು ಅಂಗಡಿಯಲ್ಲಿ ಮಾಸ್ಕ್ ಧರಿಸದೆ ವ್ಯವಹಾರ ನಡೆಸಿದಲ್ಲಿ 1000 ರೂ. ಮೇಲ್ಪಟ್ಟು ದಂಡ ಮತ್ತು ಅಂಗಡಿಯ ಲೈಸೆನ್ಸ್ ರದ್ದು ಮಾಡುವುದು ಸೇರಿದಂತೆ ಕ್ರಮ ಕೈಗೊಳ್ಳಲಾಗುವುದು. ಅಂಗಡಿ ಮುಂಗಟ್ಟುಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಸ್ಯಾನಿಟೈಸ್ ಮಾಡುವುದು ಖಡ್ಡಾಯಗೊಳಿಸಲಾಗಿದೆ. ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂದು ನಗರ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಮತ್ತಡಿ ತಿಳಿಸಿದ್ದಾರೆ.

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago