News Karnataka Kannada
Friday, May 03 2024
ಕರಾವಳಿ

ಮೂಡುಬಿದಿರೆಯಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್

Photo Credit :

ಮೂಡುಬಿದಿರೆಯಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್

ಮೂಡುಬಿದಿರೆ: ಕೊರೋನಾ ಸೋಂಕು ತಡೆಗೆ ಮುನ್ನೆಚ್ಚರಿಕೆಯ ಅಂಗವಾಗಿ ಮುಂದಿನ ಜು.20ರವರೆಗೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಅಪರಾಹ್ನದ ಬಳಿಕ ಸ್ವಯಂಪ್ರೇರಿತ ಲಾಕ್ ಡೌನ್ ಗೆ ನಿರ್ಧರಿಸಲಾಗಿದೆ.

ಮಂಗಳವಾರ ಸ್ವರ್ಣ ಮಂದಿರದಲ್ಲಿ ವರ್ತಕರ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು, ಜನ ಪ್ರತಿನಿಧಿಗಳು,ಅಧಿಕಾರಿಗಳು, ಪ್ರಮುಖರ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸಭೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಕ್ರೋಢೀಕರಿಸಿ ಮಾತನಾಡಿದ ಶಾಸಕ ಉಮಾನಾಥ ಕೋಟ್ಯಾನ್ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಆತಂಕ, ಸಾಮಾಜಿಕ ಅಂತರ ಪಾಲನೆ, ಮುನ್ನೆಚ್ಚರಿಕೆ, ಜನರ ಆರೋಗ್ಯದ ದೃಷ್ಟಿಯಿಂದ ಪುರಸಭಾ ವ್ಯಾಪ್ತಿಯೊಳಗೆ ಅಪರಾಹ್ನ 2ರವರೆಗೆ ಮಾತ್ರ ವ್ಯವಹಾರ, ಸಾರ್ವಜನಿಕ ಓಡಾಟಕ್ಕೆ ಅವಕಾಶ ನೀಡಲಾಗುತ್ತದೆ. ಬಳಿಕ ಖಾಸಗಿ ಬಸ್ ಸೇರಿದಂತೆ, ರಿಕ್ಷಾ, ಕಾರು ಇತರ ವಾಹನಗಳ ಸಂಚಾರವನ್ನು ಕೂಡ ನಿರ್ಬಂಧಿಸಲಾಗಿದೆ. ಬಾರ್, ವೈನ್‌ಶಾಪ್‌ಗಳು ಕೂಡ ಅರ್ದ ದಿನ ಮಾತ್ರ ತೆರೆದಿರುತ್ತವೆ ಎಂದವರು ಪ್ರಕಟಿಸಿದರು.

ಕೂಲಿ ಕಾರ್ಮಿಕರಿಗೆ, ಸರಕಾರಿ ನೌಕರರಿಗೆ, ಹಾಗೂ ಕೆಲಸಕ್ಕೆ ಹೋಗುವವರಿಗೆ ಸ್ವಯಂಪ್ರೇರಿತ ಲಾಕ್‌ಡೌನ್‌ನಿಂದ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಆದರೆ ಅಪರಾಹ್ನದ ಬಳಿಕ ಅನಗತ್ಯ ಓಡಾಡುವವರ ವಿರುದ್ಧ ದಂಡ, ಕೇಸು ದಾಖಲಿಸುವ, ಸೂಕ್ತ ಕಾನೂನು ಕ್ರಮಕ್ಕೆ ಪೋಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈಗಾಗಲೇ ನಿಗದಿಯಾದ ಸಭೆ ಸಮಾರಂಭಗಳು ಸರಕಾರದ ಮಾರ್ಗಸೂಚಿಯಂತೆ ಅನುಮತಿ ಪಡೆದೇ ನಡೆಸಬೇಕು. ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕರಿಸಬೇಕು ಎಂದು ಶಾಸಕರು ವಿನಂತಿಸಿದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ಸ್ವಯಂಪ್ರೇರಿತ ಲಾಕ್ ಡೌನ್ ಸ್ವಾಗತಾರ್ಹ, ಆದರೆ ಕೂಲಿಕಾರ್ಮಿಕರಿಗೆ ಮತ್ತು ನಿತ್ಯ ಕೆಲಸಕ್ಕೆ ಹೋಗುವವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಲಹೆಯಿತ್ತರು. ತಹಶಿಲ್ದಾರ್ ಅನಿತಾಲಕ್ಷ್ಮೀ, ಪುರಸಭೆ ಮುಖ್ಯಾಧಿಕಾರಿ ಇಂದು, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಕಾರ್ಮಿಕ ಮುಖಂಡ ಯಾದವ ಶೆಟ್ಟಿ, ಜೆಡಿಎಸ್ ಮುಖಂಡ ತೋಡಾರು ದಿವಾಕರ ಶೆಟ್ಟಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು