Categories: ಕರಾವಳಿ

ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ

ಮೂಡುಬಿದಿರೆ: ಕಳೆದ 14 ತಿಂಗಳುಗಳಿಂದ ಮೂಡುಬಿದಿರೆ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿತಾಲಕ್ಷ್ಮೀ ಅವರು ಮೂಡುಬಿದಿರೆಯಿಂದ ಮಂಗಳೂರಿಗೆ ವರ್ಗಾವಣೆಗೊಂಡು ಚುನಾವಣೆ ವಿಭಾಗದ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಬಡವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮೂಡುಬಿದಿರೆ ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದ್ದರು. ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ಮತ್ತು ಕೆಂಪು ಕಲ್ಲಿನ ಕೋರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುತ್ತಿದ್ದ ಅವರು ರಾಜಕರಣಿಗಳ ಕೆಂಗಣ್ಣಿಗೆ ಗುರಿಯಾಗಿ ಈ ಹಿಂದೆ ಎರಡು ಬಾರಿ ವರ್ಗಾವಣೆಗೆ ಪ್ರಯತ್ನಗಳಾಗಿತ್ತು.

ಆದರೆ ಕೋರ್ಟ್ ತಡೆ ನೀಡಿದ್ದರಿಂದ ವರ್ಗಾವಣೆ ಸ್ಥಗಿತಗೊಂಡಿತ್ತು. ಆದರೆ ಮತ್ತೆ ವರ್ಗಾವಣೆಯ ಪ್ರಯತ್ನ ಮುಂದುವರೆದಿದ್ದರಿಂದ ಇದೀಗ ವರ್ಗಾವಣೆಗೊಂಡಿದ್ದಾರೆ.

ಈ ಹಿಂದೆಯೂ ಮೂಡುಬಿದಿರೆಯಲ್ಲಿ ಪ್ರಭಾರ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದ ಗುರುಪ್ರಸಾದ್ ಮತ್ತೆ ತಾಲೂಕು ಪ್ರಭಾರ ತಹಶೀಲ್ದಾರ್ ಅಗಿ ನೇಮಕಗೊಂಡಿದ್ದಾರೆ.

Desk

Recent Posts

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

14 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

25 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

40 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

54 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

55 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago