News Karnataka Kannada
Sunday, May 05 2024
ಕರಾವಳಿ

ರಸ್ತೆ ಇಲ್ಲದ ಕುರುಂಜಿಗುಡ್ಡೆಗೆ ಭೇಟಿ ನೀಡಿ ಎಸ್ಪಿಯಿಂದ ಸ್ಥಳ ಪರಿಶೀಲನೆ

Photo Credit :

ರಸ್ತೆ ಇಲ್ಲದ ಕುರುಂಜಿಗುಡ್ಡೆಗೆ ಭೇಟಿ ನೀಡಿ ಎಸ್ಪಿಯಿಂದ ಸ್ಥಳ ಪರಿಶೀಲನೆ

ಸುಳ್ಯ: ಪೊಲೀಸ್ ಇಲಾಖೆಯ ವತಿಯಿಂದ  ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಪರಿಶೀಲನಾ ಸಭೆ   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ರಾವ್ ಬೊರಸೆ ಅಧ್ಯಕ್ಷತೆಯಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಭಾನುವಾರ ನಡೆಯಿತು.

SP Bhushan Borase visits far-flung SC colony to hear out people's woes-1ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಸುಳ್ಯ ನಗರ ವ್ಯಾಪ್ತಿಯ ಕುರುಂಜಿಗುಡ್ಡೆಯಲ್ಲಿ ಹಲವು ಪರಿಶಿಷ್ಟ ಜಾತಿಯ ಕುಟುಂಬಗಳು ವಾಸವಿದ್ದು ಅವರಿಗೆ ಸರ್ಕಾರ ಹಕ್ಕು ಪತ್ರ ನೀಡಿದೆ. ಆದರೆ ಅಲ್ಲಿಗೆ ಹೋಗಲು ರಸ್ತೆ ಇಲ್ಲದೆ, ಗುಡ್ಡವನ್ನು ಹತ್ತಲು ಹಲವು ಮೆಟ್ಟಿಲುಗಳನ್ನು ಏರಿಕೊಂಡು ಹೋಗಬೇಕಾದ ಸ್ಥಿತಿ ಇದೆ. ಇದರಿಂದ ಇಲ್ಲಿಯ ಜನರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ ಎಂದು ಕೆ.ಗೋಪಾಲ ಕಾಡುಮಠ ಸಭೆಯ ಗಮನಕ್ಕೆ ತಂದರು. ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಎಸ್ಪಿ ಭೂಷಣ್ ಜಿ ಬೊರಸೆ ಮತ್ತು ಇತರ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಮಸ್ಯೆಯನ್ನು ಸಂಬಂಧಪಟ್ಟವವರ ಗಮನಕ್ಕೆ ತಂದು ಶೀಘ್ರ ಪರಿಹರಿಸಲು ಪ್ರಯತ್ನಿಸುವುದಾಗಿ ಎಸ್ಪಿ ಭರವಸೆ ನೀಡಿದರು.

ಬಂಟ್ವಾಳದ ಕಂಚಿನಡ್ಕ ಪದವು ಎಂಬಲ್ಲಿ ಅಕ್ರಮವಾಗಿ ಬಂಡೆ ಕಲ್ಲಿನ ಸ್ಪೋಟ ನಡೆಸುವ ಮತ್ತು ಗಾಂಜಾ ದಂಧೆ ನಡೆಯುತಿದೆ ಎಂದು ವಿಶ್ವನಾಥ ಬಂಟ್ವಾಳ ಸಭೆಯ ಗಮನಕ್ಕೆ ತಂದರು. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಭರವಸೆ ನೀಡಿದರು. ಬಂಟ್ವಾಳದಲ್ಲಿ ರಸ್ತೆ ಬದಿಯಲ್ಲಿ ಅಂಗಡಿ ಮುಂಗಟ್ಟು ಹೊಂದಿರುವ ಕೆಲವರು ರಸ್ತೆ ಅಗಲೀಕರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದನ್ನು ತೆರವು ಮಾಡಿ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವನಾಥ ಬಂಟ್ವಾಳ ಒತ್ತಾಯಿಸಿದರು. ಸುಬ್ರಹ್ಮಣ್ಯ ಪರಿಸರದಲ್ಲಿ ಅಪಘಾತಗಳು ಉಂಟಾದರೆ ಆಂಬುಲೆನ್ಸ್ ವ್ಯವಸ್ಥೆ ಇಲ್ಲದೆ ಸಮಸ್ಯೆ ಉಂಟಾಗುತಿದೆ. ಆದುರಿಂದ ಸುಬ್ರಹ್ಮಣ್ಯಕ್ಕೆ ಆಂಬುಲೆನ್ಸ್ ವ್ಯವಸ್ಥೆ ಒದಗಿಸಬೇಕು ಎಂದು ಆನಂದ ಬೆಳ್ಳಾರೆ ಒತ್ತಾಯಿಸಿದರು.
ಬೆಳ್ಳಾರೆ ಪೊಲೀಸ್ ಠಾಣೆಗೆ ಸಾಕಷ್ಟು ಸಿಬ್ಬಂದಿಯ ನೇಮಕಾತಿ ಮಾಡಬೇಕು, ಪೈಚಾರ್ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದರು. ಹೊಸ ಪೊಲೀಸ್ ಸಿಬ್ಬಂದಿಗಳ ನೇಮಕಾತಿ ನಡೆದಿದ್ದು ತರಬೇತಿ ಮುಗಿದ ಬಳಿಕ ಬೆಳ್ಳಾರೆ ಠಾಣೆಗೆ ಅಗತ್ಯವಿರುವಷ್ಟು ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು ಎಂದು ಎಸ್ಪಿ ತಿಳಿಸಿದರು. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಬೆಂಕಿ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂದು ತಿಳಿಸಬೇಕು, ಇದಕ್ಕೆ ಕಾರಣಕರ್ತರಾದ ಮೇಲೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿಯ ನಾಗರಾಜ್ ಎಸ್. ಆಗ್ರಹಿಸಿದರು.  

ಪ.ಜಾತಿ.ಪ.ಪಂಗಡದ ಜನರಿಗಾಗಿ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯನ್ನು ಈಗ ಆರ್ಟಿಸಿಯಲ್ಲಿ ಸರ್ಕಾರ ಭೂಮಿ ಎಂದು ನಮೂದಿಸಲಾಗುತ್ತಿದ್ದು ಇದನ್ನು 94ಸಿ ಯೋಜನೆಯಡಿಯಲ್ಲಿ ಇತರರಿಗೆ ವಿತರಣೆ ಮಾಡುತ್ತಿರುವುದು ಕಂಡು ಬಂದಿದೆ ಇದು ಸರಿಯಲ್ಲ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಡಿಸಿ ಮನ್ನಾ ಭೂಮಿ, 94ಸಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಹಲವರು ವಿಷಯ ಪ್ರಸ್ತಾಪಿಸಿದಾಗ ಈ ಕುರಿತು ಚರ್ಚೆ ನಡೆಯಿತು. ಇದನ್ನು ಸಂಬಂಧಪಟ್ಟ ಕಂದಾಯ ಇಲಾಖಾ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಎಸ್ಪಿ ತಿಳಿಸಿದರು. ಸಂಪಾಜೆ-ಸುಳ್ಯ ರಸ್ತೆಯ   ಬದಿಯಲ್ಲಿ ಕೇಬಲ್ ಗುಂಡಿ ತೋಡಿ ಮುಚ್ಚದೆ ಸಾರ್ವಜನಿಕರು ತೀವ್ರ ಸಮಸ್ಯೆಗೆ ಸಿಲುಕಿದ್ದಾರೆ. ಅಪಘಾತಗಳು ನಿರಂತರವಾಗುತ್ತಿದ್ದು ಕೆಲವು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ವಿಜಯ ಸಂಪಾಜೆ ಒತ್ತಾಯಿಸಿದರು. ಈ ಕುರಿತು ಗಮನ ಹರಿಸುವುದಾಗಿ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದರು. ಡಿವೈಎಸ್ಪಿಗಳಾದ ಭಾಸ್ಕರ ರೈ, ರವೀಶ್, ಪ್ರೊಬೇಷನರಿ ಐಪಿಎಸ್ ಅಧಿಕಾರಿ ನಾಗೇಶ್, ಸುಳ್ಯ ವೃತ್ತ ನಿರೀಕ್ಷಕ ವಿ.ಕೃಷ್ಣಯ್ಯ, ಸುಳ್ಯ ಎಸ್ಐ ಚಂದ್ರಶೇಖರ ಹೆಚ್.ವಿ, ಬೆಳ್ಳಾರೆ ಎಸ್ಐ ಚೆಲುವಯ್ಯ ಮತ್ತಿತರರು ಉಪಸ್ಥಿತರಿದ್ದರು.

ಐವರ್ನಾಡು ದರೋಡೆ- ಆರೋಪಿಗಳ ಶೀಘ್ರ ಬಂಧನ
ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ಹಾಡಹಗಲೇ ಕಾರನ್ನು ಅಡ್ಡಗಟ್ಟಿ ಅಡಕೆ ವ್ಯಾಪಾರಿಯನ್ನು ದರೋಡೆ ಮಾಡಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಎಸ್ಪಿ ಭೂಷಣ್ ಜಿ ಬೊರಸೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದ್ದು ಆರೋಪಿಗಳ ಬಗ್ಗೆ ಕೆಲವೊಂದು ಸೂಚನೆ ದೊರೆತಿದೆ. ಒಂದು ವಾರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು