Categories: ಕರಾವಳಿ

ರಸ್ತೆ ಬದಿ ತ್ಯಾಜ್ಯ ಸುರಿದ ವಿಚಾರ: 5 ಸಾವಿರ ರೂ. ದಂಡ ವಿಧಿಸಿದ ನಗರಸಭೆ

ಪುತ್ತೂರು: ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿದು ಹೋಗುತ್ತಿದ್ದ ಪಿಕಪ್ ವಾಹನವನೊಂದನ್ನು ನಗರಸಭೆ ಪೌರ ಕಾರ್ಮಿಕರು ರೆಡ್‍ಹ್ಯಾಂಡ್ ಆಗಿ ಹಿಡಿದ ಮತ್ತು ಪೌರಾಯುಕ್ತರು ರಸ್ತೆ ಬದಿ ತ್ಯಾಜ್ಯ ಸುರಿದ ವಾಹನ ಮಾಲಕ, ಚಾಲಕರಿಗೆ ಬರೊಬ್ಬರಿ ರೂ. 5 ಸಾವಿರ ದಂಡ ವಿಧಿಸಿದ ಘಟನೆ ಅ.30ರಂದು ನಡೆದಿದೆ.

ಪಡೀಲು ವಿವೇಕಾನಂದ ಕಾಲೇಜು ರಸ್ತೆಯ ಕಾಲೇಜು ಸಮೀಪ ಕರ್ಮಲ ಎಂಬಲ್ಲಿ ಪಿಕಪ್ ಜೀಪೊಂದು(ಕೆ.ಎ 21 ಎ 1877) ರಸ್ತೆ ಬದಿ  ಬಂದು ನಿಂತ್ತಿದ್ದಲ್ಲದೆ ಜೀಪಿನಿಂದ ಇಳಿದ ಕಾರ್ಮಿಕರು ಜೀಪಿನ ಚಾಲಕನ ಸೂಚನೆಯಂತೆ ತ್ಯಾಜ್ಯಗಳನ್ನು ರಸ್ತೆ ಬದಿಯಲ್ಲಿ ಸುರಿಯುತ್ತಿದ್ದ ವೇಳೆ ನಗರಸಭೆ ಪೌರ ಕಾರ್ಮಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಘಟನಾ ಸ್ಥಳಕ್ಕೆ ಆಗಮಿಸಿದ ನಗರಸಭೆ ಆರೋಗ್ಯ ನಿರೀಕ್ಷಕ ರಾಮಚಂದ್ರ ಮತ್ತು ಪರಿಸರ ಅಭಿಯಂತರ ಗುರುಪ್ರಸಾದ್ ಶೆಟ್ಟಿಯವರು ತ್ಯಾಜ್ಯ ಸುರಿದ ಪಿಕಪ್ ಜೀಪನ್ನು ವಶಕ್ಕೆ ಪಡೆದು ಕೊಂಡು ನಗರಸಭೆ ಪೌರಾಯುಕ್ತ ಮುಂದೆ ಹಾಜರುಪಡಿಸಿದರು. ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿಯವರು ರೂ. 5ಸಾವಿರ ದಂಡ ಪಾವತಿಸುವಂತೆ ಸೂಚಿಸಿದರು. ಪಿಕಪ್ ಜೀಪಿನ ಚಾಲಕರು ರೂ. 5 ಸಾವಿರ ದಂಡ ಪಾವತಿಸಿ ತೆರಳಿದ್ದಾರೆ.

Desk

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 min ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

24 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

40 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago