News Karnataka Kannada
Sunday, May 12 2024
ಕರಾವಳಿ

ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲೇ ಕೊರೋನ ಸೋಂಕು ಹೆಚ್ಚಳ

Corona World 10072021
Photo Credit :

ಬೆಂಗಳೂರು, ; ರಾಜ್ಯದಲ್ಲಿ ಕೊರೊನಾ ಸೋಂಕು ಸಂಖ್ಯೆ ಮತ್ತೆ ಹೆಚ್ಚಳವಾಗಿದ್ದು ಸಾವಿನ ಸಂಖ್ಯೆ ತುಸು ಕಡಿಮೆಯಾಗಿದೆ.ರಾಜಧಾನಿ ಬೆಂಗಳೂರಿಗಿಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಸೋಂಕು ಸಂಖ್ಯೆ ದೃಢಪಟ್ಟಿದೆ.ಬೀದರ್, ಕೊಪ್ಪಾಳ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.
ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.1.15 ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ.1.61 ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,728 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ರಾಜ್ಯದಲ್ಲಿಂದು 1,857 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 30 ಮಂದಿ ಸಾವನ್ನಪ್ಪಿದ್ದಾರೆ ಜೊತೆ 1,950ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.ಹೊಸದಾಗಿ ದಾಖಲಾಗಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,24 ,732 ಕ್ಕೆ ಏರಿಕೆಯಾಗಿದೆ ಜೊತೆಗೆ ಚೇತರಿಸಿಕೊಂಡವರ ಸಂಖ್ಯೆ 28,65,067 ಕ್ಕೆ ಹೆಚ್ಚಳವಾಗಿದೆ.
ಸೋಂಕಿನಿಂದ ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 36,911ಕ್ಕೆ ಹೆಚ್ಚಳವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಏರಿಕೆಯಾಗಿದೆ .ಇಂದು 321 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 5 ಮಂದಿ ಸಾವನ್ನಪ್ಪಿದ್ದಾರೆ .ಜೊತೆಗೆ 413 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,61,275 ಮಂದಿ್ಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ 4,04,33,427 ಕ್ಕೆ ಹೆಚ್ಚಳವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು