ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಕ್ಷಬೇಧ ಮರೆತು ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಮಾಜಿ ಸಚಿವರಾದ ಎಂ. ವೀರಪ್ಪ ಮೊಯ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು, ಸಮಾಜ ಕಲ್ಯಾಣ ಮತ್ತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಇಲ್ಲವೇ ಅವರ ಕುಟುಂಬಸ್ಥರಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.