ಪುತ್ತೂರು : ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆಯಾಗಿ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಗೌರವ ಪೂರ್ವಕವಾಗಿ ಸ್ವಾಗತಿಸಿದರು.
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಸಚಿವರು ದೇವರ ಕೃಪೆಗೆ ಪಾತ್ರರಾದರು.
ಬಳಿಕ ಶ್ರೀ ವೆಂಕಟರಮಣ ದೇವಸ್ಥಾನ, ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಅಂಗವಾಗಿ ಪುತ್ತೂರು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.