News Karnataka Kannada
Monday, April 29 2024
ಕರಾವಳಿ

ಲಾರಿ-ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು

Photo Credit :

ಲಾರಿ-ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಕಾಸರಗೋಡು: ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಬುಧವಾರ ರಾತ್ರಿ ಮಂಜೇಶ್ವರ ಹೊಸಂಗಡಿ ಚೆಕ್ ಪೋಸ್ಟ್ ಬಳಿ ನಡೆದಿದೆ.
ಮೃತಪಟ್ಟವನನ್ನು ಮಂಗಳೂರು ಶ್ರೀನಿವಾಸ್ ಕಾಲೇಜಿನ ಪದವಿ ವಿದ್ಯಾರ್ಥಿ, ಕುಂಜತ್ತೂರಿನ ಶಾಹಜಾನ್ (20) ಗುರುತಿಸಲಾಗಿದೆ. ಮಂಗಳೂರು ಕಡೆಗೆ ಮೀನು ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಸ್ಕೂಟರ್ ಪರಸ್ಪರ ಡಿಕ್ಕಿ ಹೊಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರೂ ಆಗಲೇ ಮೃತಪಟ್ಟಿದ್ದನು. ಅಪಘಾತದ ಹಿನ್ನಲೆಯಲ್ಲಿ ರೊಚ್ಚಿಗಿದ್ದ ತಂಡವು ಚೆಕ್ ಪೋಸ್ಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ಇದರಿಂದ ಒಂದು ಗಂಟೆಗೂ ಅಧಿಕ ಸಮಯ ಕಾಸರಗೋಡು – ಮಂಗಳೂರು ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲಿಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ವಾರದ ಹಿಂದೆ ಸ್ಕೂಟರ್ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು