ವಿವಿಧ ಹಿಂದೂ ಉತ್ಸವಗಳು ಒಂದೇ ದಿನಕ್ಕೆ ಸೀಮಿತ

ಬೆಳ್ತಂಗಡಿ: ಮುಂದಿನ ದಿನಗಳಲ್ಲಿ ಬರುವ ವಿವಿಧ ಹಿಂದೂ ಉತ್ಸವಗಳನ್ನು ಒಂದೇ ದಿನದಲ್ಲಿ ಹಾಗು ನಿಯಮಿತ ಸಂಖ್ಯೆಯಲ್ಲಿ ಮಾತ್ರ ಮಾಡುವ ನಿರ್ಣಯಕ್ಕೆ ಮಂಗಳವಾರ ಇಲ್ಲಿನ ಕಲಾಭವನದಲ್ಲಿ ನಡೆದ ವರಮಹಾಲಕ್ಷ್ಮೀ, ಶ್ರೀಕೃಷ್ಣ ಜನ್ಮಾಷ್ಟಮಿ, ಶ್ರೀಗಣೇಶೋತ್ಸವ ಸಮಿತಿ, ಶಾರದಾ ಪೂಜಾ ಸಮಿತಿಯ ಅಧ್ಯಕ್ಷ, ಕಾರ್ಯದರ್ಶಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೊರೋನಾ ಮಹಾಮಾರಿಯ ಮೂರನೇ ಅಲೆಯ ಭೀತಿಯ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಬರುವ ಉತ್ಸವಗಳನ್ನು ಜನತೆಯ ಆರೋಗ್ಯದ ಹಾಗೂ ಸರಕಾರದ ನಿಯಮಾವಳಿಗಳಂತೆ ನಡೆಸಲು ತೀರ್ಮಾನಿಸಲಾಯಿತು.

ಎಲ್ಲರ ಅಭಿಪ್ರಾಯಗಳನ್ನು ಆಲಿಸಿದ ಶಾಸಕ ಹರೀಶ್ ಪೂಂಜ ಅವರು, ಕೊರೋನಾ ತಡೆಗಟ್ಟುವ ಉದ್ದೇಶದಿಂದ ಎಲ್ಲಾ ಉತ್ಸವಗಳನ್ನು ಕಳೆದ ವರ್ಷದ ಮಾದರಿಯಲ್ಲಿಯೇ ಒಂದೇ ದಿನಕ್ಕೆ ಸೀಮಿತಗೊಳಿಸುವ, ಪೂಜೆಗೆ ಮಾತ್ರ ಅವಕಾಶ ನೀಡುವ ನಿರ್ಧಾರಕ್ಕೆ ಬಂದರು. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು, ಮೆರವಣಿಗೆಗೆ, ಪೆಂಡಾಲ್ ಹಾಕಲು ಅವಕಾಶ ಇಲ್ಲ. ಅನ್ನ ಸಂತರ್ಪಣೆ ಬಗ್ಗೆ ಜಿಲ್ಲಾಡಳಿತ ನಿರ್ಧರಿಸಲಿದೆ ಎಂದರು.

ಕೊರೋನಾ ಇರಲಿ, ಇಲ್ಲದಿರಲಿ ಪ್ರತಿ ವರ್ಷ ಇದೇ ರೀತಿಯ ಸಭೆಗಳನ್ನು ನಡೆಸುತ್ತಾ ಬಂದಲ್ಲಿ ಎಲ್ಲಾ ಉತ್ಸವಗಳನ್ನು ಶಿಸ್ತಿನಲ್ಲಿ, ಏಕರೂಪದಲ್ಲಿ ನಡೆಸಲು ಸಾಧ್ಯವಾಗಲಿದೆ – ಹರೀಶ ಪೂಂಜ

ವಿ.ಹಿಂ.ಪ. ಜಿಲ್ಲಾ ಉಪಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಕಾರ್ಯದರ್ಶಿ ನವೀನ್ ನೆರಿಯ, ಬಿಜೆಪಿ ಮಂಡಲಾಧ್ಯಕ್ಷ ಜಯಂತ ಕೋಟ್ಯಾನ್, ಶ್ರೀನಿವಾಸ ಧರ್ಮಸ್ಥಳ, ರಾಜೇಶ್ ಪೆರ್ಬುಡ,
ನೂರಕ್ಕೂ ಹೆಚ್ಚು ಮಂದಿ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Raksha Deshpande

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

10 seconds ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

18 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

34 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

53 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

57 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago