News Karnataka Kannada
Monday, May 06 2024
ಕರಾವಳಿ

ಶಿರಾಡಿ ಘಾಟಿ: ಭಾರದ ವಾಹನಗಳ ಸಂಚಾರಕ್ಕೆ ಅವಕಾಶ

Shiradi Road 23 7 21
Photo Credit :

ಮಂಗಳೂರು: ಶಿರಾಡಿ ಘಾಟಿಯಲ್ಲಿ 20 ಟನ್‌ಗೂ ಹೆಚ್ಚು ಭಾರದ ವಾಹನಗಳೂ ಸೇರಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಹಾಸನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಆದೇಶ ಹೊರಡಿಸಿದ್ದಾರೆ.

ಭಾನುವಾರದಿಂದ ಪ್ರತಿನಿತ್ಯ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸಿಂಗಲ್‌ ಲೇನ್‌ನಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಹಾಸನದ ಮಾರನಹಳ್ಳಿ ಎಂಬಲ್ಲಿ ಭೂ ಕುಸಿತ ಉಂಟಾದ ಕಾರಣಕ್ಕೆ, ಅಲ್ಲಿಂದ ದೋಣಿಗಾಲ್ ನಡುವಿನ ಭಾಗದಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು. ಭೂ ಕುಸಿತವಾದ ಸ್ಥಳ ಹಾಗೂ ವಾಹನಗಳ ಸಂಚಾರದ ಸ್ಥಿತಿಗತಿಗಳನ್ನು ಪರಿಶೀಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಶನಿವಾರ ಜಂಟಿ ಸಮೀಕ್ಷೆ ನಡೆಸಿದ್ದರು.

ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ತಾಂತ್ರಿಕ ವರದಿ ಬಳಿಕ ಈ ಅವಕಾಶ ಕಲ್ಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು