News Karnataka Kannada
Monday, May 20 2024
ಕರಾವಳಿ

ಸಾಮರಸ್ಯ, ಒಗ್ಗಟ್ಟಿನ ಜೀವನದಿಂದ ಯಶಸ್ಸು: ಡಾ.ಪೀಟರ್ ಪಾವ್ಲ್ ಸಲ್ಡಾನಾ

Photo Credit :

ಸಾಮರಸ್ಯ, ಒಗ್ಗಟ್ಟಿನ ಜೀವನದಿಂದ ಯಶಸ್ಸು: ಡಾ.ಪೀಟರ್ ಪಾವ್ಲ್ ಸಲ್ಡಾನಾ

ಬಂಟ್ವಾಳ: ಸಾಮರಸ್ಯದ ಮತ್ತು ಒಗ್ಗಟ್ಟಿನ ಜೀವನ ನಡೆಸಿದರೆ ಯಶಸ್ಸನ್ನು ಕಾಣಬಹುದು ಎಂಬುದಕ್ಕೆ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ವ್ಯಾಪ್ತಿಯ ಕುಟುಂಬಗಳೇ ಸಾಕ್ಷಿ. ಸೂರಿಕುಮೇರು ಚರ್ಚ್‍ನ ಶತಮಾನೋತ್ತರ ಬೆಳ್ಳಿಹಬ್ಬದ ಆಚರಣೆಯೂ ಅನುಕರಣೀಯ ಎಂದು ಮಂಗಳೂರು ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಅತೀ ವಂ. ಡಾ. ಪೀಟರ್ ಪಾವ್ಲ್ ಸಲ್ದಾನಾ ಹೇಳಿದರು.

ಬಂಟ್ವಾಳ ತಾಲೂಕಿನ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ಶತಮಾನೋತ್ತರ ಬೆಳ್ಳಿಹಬ್ಬ ಸಮಾರೋಪ ಸಮಾರಂಭದಲ್ಲಿ ಬುಧವಾರ ಪ್ರವೇಶ ದ್ವಾರ ಉದ್ಘಾಟಿಸಿ, ವಿಶೇಷ ಬಲಿಪೂಜೆಯನ್ನು ನಡೆಸಿ, ಆಶೀರ್ವಚನ ನೀಡಿದ ಅವರು, ಚಿಕ್ಕ ಗ್ರಾಮದಲ್ಲಿಯೂ ಮಾದರಿ ಕಾರ್ಯವನ್ನು ಅನುಷ್ಠಾನ ಮಾಡಿದ, ಧರ್ಮಗುರುಗಳು, ಪಾಲನಾ ಸಮಿತಿ, ಹಾಗೂ ಎಲ್ಲ ಕುಟುಂಬಗಳೂ ಅಭಿನಂದನೀಯ ಎಂದರು.

ಅಂತರಂಗ ಶುದ್ಧಿಯಾಗಿದ್ದಾಗ ಮಾತ್ರ ನಾವು ದೇವರಿಗೆ ಪ್ರಿಯವಾಗಿರುತ್ತೇವೆ,  ಪರಸ್ಪರ ಪ್ರೀತಿ ವಿಶ್ವಾಸ  ನಂಬಿಕೆಯೇ ಜೀವನದ ಧ್ಯೇಯವಾಗಲಿ, ಉಸಿರಾಗಲಿ ಎಂದ ಅವರು ಶತಮಾನೋತ್ತರ ಬೆಳ್ಳಿಹಬ್ಬದ ಆಚರಣೆಯ ಮೂಲಕ  ಬಂಧುತ್ವಕ್ಕೆ, ಸಾಮರಸ್ಯಕ್ಕೆ  ಹೊಸ ಪ್ರೇರಣೆ ಒದಗಿಸಿದ್ದಾರೆ ಎಂದು ಚರ್ಚ್ ವ್ಯಾಪ್ತಿಯ ಕುಟುಂಬಗಳನ್ನು ಶ್ಲಾಘಿಸಿದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ  ಅತೀ ವಂದನೀಯ ಡಾ.ಲಾರೆನ್ಸ್ ಮುಕ್ಕುಝಿ ಯವರು ಮಾತನಾಡಿ, ಚರ್ಚ್‍ನ ವ್ಯಾಪ್ತಿಯ ಮಕ್ಕಳೆಲ್ಲರೂ ಬಾಲಯೇಸುವಿನಂತಿರಬೇಕು, ತಾಯಂದಿರು ಕನ್ಯಾಮಾತೆಯಂತಿರಬೇಕು ಎಂದರು. ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್ ಶುಭಹಾರೈಸಿದರು.

ಮೊಗರ್ನಾಡ್ ಚರ್ಚ್‍ನ ಧರ್ಮಗುರು ಡಾ.ಮಾರ್ಕ್ ಕಾಸ್ಟೆಲಿನೋ ಮಾತನಾಡಿ,  ಸ್ನೇಹ ಹಾಗೂ ವಿಶ್ವಾಸಮಯ ವಾತಾವರಣ ಬದುಕಿಗೆ ಹೊಸ ಚೈತನ್ಯ ನೀಡುತ್ತದೆ, ಸೂರಿಕುಮೇರು ಚರ್ಚ್ ನಲ್ಲಿ ಈ ಚೈತನ್ಯ ಪಸರಿಸುತ್ತಿದೆ ಎಂದರು.

ಕಾಂಕ್ರೀಟ್ ರಸ್ತೆ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಚರ್ಚ್ ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡುವುದಾಗಿ ಘೋಷಿಸಿ, ಸಾಮರಸ್ಯದ ಬದುಕಿಗೆ ಚರ್ಚ್ ಮಾದರಿಯಾಗಿದ್ದು, ಕೋಮು ಸಾಮರಸ್ಯವನ್ನು ಕಾಪಾಡುವಲ್ಲಿ ಸಹಾಯ ಮಾಡಿದೆ. 125 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಇದು ಪುಣ್ಯಭೂಮಿಯಾಗಿದೆ ಎಂದರು.

ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ರೋಷನ್ ಬೊನಿಫಾಸ್ ಮಾರ್ಟಿಸ್ ಮಾತನಾಡಿ, ವಂದನೀಯ ಫಾದರ್ ಗ್ರೆಗರಿ ಪಿರೇರಾ ರವರು  ಚರ್ಚ್‍ನ ಸರ್ವತೋಮುಖ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ  ಕಳೆದ 2018ರ ಸೆಪ್ಟೆಂಬರ್ 4 ರಿಂದ ಆರಂಭಗೊಂಡು ತಿಂಗಳಿಗೊಂದರಂತೆ 14 ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ದೇವಾಲಯ ವ್ಯಾಪ್ತಿಯ 152 ಕುಟುಂಬಗಳು ಒಟ್ಟು ಸೇರಿ ಇಲ್ಲಿನ ಎಲ್ಲಾ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಚರ್ಚ್ನ ಶತಮಾನೋತ್ತರ ಬೆಳ್ಳಿಹಬ್ಬದ ಕಾರ್ಯಕ್ರಮಗಳಿಂದ ತೊಡಗಿ, ಹಲವು ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿ ನಡೆಸಲಾಗಿದ್ದು ಎಲ್ಲಾ ಕಾರ್ಯಗಳೂ ಚರ್ಚ್ ವ್ಯಾಪ್ತಿಯ ಕುಟುಂಬಗಳ ತನು ಮನ ಧನದ ಸಹಕಾರದಿಂದಲೇ ನಡೆದಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಪಂ ಸದಸ್ಯ ಪ್ರಭಾಕರ ಪ್ರಭು, ಮಾಣಿ ಗ್ರಾಪಂ ಅಧ್ಯಕ್ಷೆ ಮಮತಾ ಶೆಟ್ಟಿ,  ಸಿಸ್ಟರ್ ನ್ಯಾನ್ಸಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶತಮಾನೋತ್ತರ ಬೆಳ್ಳಿಹಬ್ಬದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಶತಮಾನೋತ್ತರ ಬೆಳ್ಳಿ ಹಬ್ಬದ ಆಚರಣೆಗೆ ತೊಡಗಿಸಿಕೊಂಡ ಕುಟುಂಬಗಳನ್ನು ಗುರುತಿಸಿ ಗೌರವಿಸಲಾಯಿತು. ಅತಿಥಿಗಳ ಸ್ವಾಗತಕ್ಕೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು