Categories: ಕರಾವಳಿ

ಸುಳ್ಯದಲ್ಲಿ ಶೇ. 60 ಪೂರ್ಣ ಬೆಳೆ ಸರ್ವೇ ಪೂರ್ಣ- ಇನ್ನು ಬೆಳೆ ಸಮೀಕ್ಷೆ ದಾಖಲಾತಿಗೆ ಮೊಬೈಲ್ ಆಪ್

ಸುಳ್ಯ: ಸುಳ್ಯ ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಶೇ.60ರಷ್ಟು ಪೂರ್ಣಗೊಂಡಿದ್ದು ಉಳಿದ ಶೇ.40ನ್ನು ಕೂಡಲೇ ಪೂರ್ತಿಗೊಳಿಸುವಂತೆ ಪುತ್ತೂರು ಸಹಾಯಕ ಆಯುಕ್ತ ರಘುನಂದನ ಮೂರ್ತಿ ಸೂಚನೆ ನೀಡಿದ್ದಾರೆ.

ಮೊಬೈಲ್ ಆಪ್ ಮೂಲಕ ರೈತರ ಬೆಳೆ ಸಮೀಕ್ಷೆ ಮಾಹಿತಿ ಸಂಗ್ರಹಿಸುವ ಯೋಜನೆ ಪೂರ್ಣಗೊಳಿಸುವ ಬಗ್ಗೆ ಕ್ರಮಕೈಗೊಳ್ಳಲು ಗುರುವಾರ ಸುಳ್ಯ ತಾಲೂಕು ಪಂಚಾಯಿತಿ ನಡೆದ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದಲ್ಲಿ ಪ್ರಥಮವಾಗಿ ರಾಜ್ಯದಲ್ಲಿ ಬೆಳೆ ಸಮೀಕ್ಷೆ ಯೋಜನೆ ಜಾರಿ ತರಲಾಗಿದೆ. ರೈತರು ಇನ್ಮುಂದೆ ಗ್ರಾಮಕರಣಿಕರ ಕಚೇರಿಗೆ ತೆರಳಿ ಬೆಳೆ ನಮೂದಿಸಿಕೊಳ್ಳಬೇಕಿಲ್ಲ.

ತಮ್ಮ ಮೊಬೈಲ್ನಲ್ಲಿ `ಫಾರ್ಮರ್ಸ್ ಕ್ರಾಪ್ ಸರ್ವೇ’ ಆಪ್ನ ಮೂಲಕ ರೈತರೇ ಸ್ವತ: ತಾವೇ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ನಮೂದಿಸಬಹುದಾಗಿದೆ. ಮುಂದೆ ಸರ್ಕಾರದ ವಿವಿಧ ಅನುದಾನ ಪಡೆಯಲು ಈ ಬೆಳೆ ನಮೂದು ಕಡ್ಡಾಯವಾಗಲಿದೆ ಎಂದರು.

ಜಿಲ್ಲೆಯಲ್ಲಿ ಪೈಕಿ ಸುಳ್ಯ ತಾಲೂಕಿನಲ್ಲಿ ಅತ್ಯಧಿಕ 93,967 ಪಹಣಿ ಪತ್ರಗಳ ಪೈಕಿ 56092 ಪಹಣಿ ಪತ್ರಗಳಲ್ಲಿ ಇಲಾಖಾಧಿಕಾರಿಗಳ ಸಹಯೋಗದೊಂದಿಗೆ ಶೇ.60 ಬೆಳೆ ನಮೂದುಗೊಂಡಿದೆ.ಉಳಿದ ಶೇ. 40 ಭಾಗ ತ್ವರಿತಗತಿಯಲ್ಲಿ ನಡೆಸಲು ಆಪ್ ನ ವಿಷಯ ಮತ್ತು ನಮೂದಿಸುವ ಕಾರ್ಯದ ಬಗ್ಗೆ ಹೆಚ್ಚು ಪ್ರಚುರಪಡಿಸಿ ಕೃಷಿಕರಿಗೆ ಮಾಹಿತಿ ನೀಡಬೇಕಾಗಿದೆ ಎಂದು ಅವರು ಹೇಳಿದರು.

ತಹಶೀಲ್ದಾರ್ ಎಂ.ಎಂ. ಗಣೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್ ಉಪಸ್ಥಿತರಿದ್ದರು. ಸುಳ್ಯ ಕಸಬಾ ಗ್ರಾಮಕರಣಿಕ ತಿಪ್ಪೇಶಪ್ಪ ಮೊಬೈಲ್ ಮೂಲಕ ರೈತರು ಬೆಳೆ ದಾಖಲಾತಿ ಮಾಡುವ ವಿಧಾನ ಕುರಿತಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಮತ್ತು ನರಿಯಪ್ಪ ಮಠದ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಕರಣಿಕರು ಪಾಲ್ಗೊಂಡಿದ್ದರು.

 

Desk

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago