News Karnataka Kannada
Sunday, May 19 2024
ಕರಾವಳಿ

ಸುಳ್ಯ-ಕರಿಕೆ-ಮಡಿಕೇರಿ ರಸ್ತೆಗೆ ಅಭಿವೃದ್ಧಿ ಭಾಗ್ಯವಿಲ್ಲ: ನಾಳೆ ಕರಿಕೆ ಬಂದ್

Photo Credit :

ಸುಳ್ಯ-ಕರಿಕೆ-ಮಡಿಕೇರಿ ರಸ್ತೆಗೆ ಅಭಿವೃದ್ಧಿ ಭಾಗ್ಯವಿಲ್ಲ: ನಾಳೆ ಕರಿಕೆ ಬಂದ್

ಸುಳ್ಯ: ಸುಳ್ಯ-ಪಾಣತ್ತೂರು-ಮಡಿಕೇರಿ ಸಂಪರ್ಕಿಸುವ ಕರಿಕೆ-ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಣದೆ ದಶಕಗಳೇ ಕಳೆದಿದ್ದು, ಇದೀಗ ಈ ರಸ್ತೆ ವಾಹನ ಸಂಚಾರಕ್ಕೆ ಮಾತ್ರವಲ್ಲದೆ, ಕಾಲ್ನಡಿಗೆಗೂ ಯೋಗ್ಯವಿಲ್ಲದಂತಾಗಿದೆ. ಇದನ್ನು ಪ್ರತಿಭಟಿಸಿ ಡಿ.4ರಂದು ಕರಿಕೆ ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಲು ಸಾರ್ವಜನಿಕರು ನಿರ್ಧರಿಸಿದ್ದಾರೆ ಎಂದು ಗಡಿ ಪ್ರದೇಶವಾದ ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ತಿಳಿಸಿದ್ದಾರೆ.

ಕೊಡಗಿನ ಭಾಗವಾದ ಕರಿಕೆ ಗ್ರಾಮ ಕೇರಳದ ಕಾಸರಗೋಡು ಜಿಲ್ಲೆಗೆ ಹೊಂದಿಕೊಂಡಿದ್ದು, ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ಸಮೀಪದಲ್ಲಿದೆ. ಕರಿಕೆಯಿಂದ ಕೊಡಗಿನ ಜಿಲ್ಲಾ ಕೇಂದ್ರವಾದ ಮಡಿಕೇರಿಗೆ ಸುಮಾರು 70 ಕಿ.ಮೀ. ದೂರವಿದ್ದರೆ, ಸುಳ್ಯ ತಾಲೂಕು ಕೇಂದ್ರಕ್ಕೆ ಕೇವಲ 25 ಕಿ.ಮೀ. ಅಂತರವಿದೆ. ಕೇರಳದ ಪ್ರಮುಖ ಪಟ್ಟಣಗಳಲ್ಲೊಂದಾದ ಕಾಂಞಂಗಾಡ್‍ಗೆ  50 ಕಿ.ಮೀ ಅಂತರವಿದೆ. ಆದರೆ ಕೊಡಗು ಜಿಲ್ಲೆಗೆ ಸೇರಿದ ಕರಿಕೆ ಗ್ರಾಮ ಪಂಚಾಯಿತಿಯ ಜನರು ತಮ್ಮ ಕೆಲಸ ಕಾರ್ಯಗಳಿಗೆ 70 ಕಿ.ಮೀ. ದೂರದಲ್ಲಿರುವ ತಾಲೂಕು ಹಾಗೂ ಜಿಲ್ಲಾ ಕೇಂದ್ರವಾದ ಮಡಿಕೇರಿಗೆ ಪ್ರತಿನಿತ್ಯ ಸಂಚರಿಸಬೇಕಾಗಿದ್ದು, ಸಂಚಾರಕ್ಕೆ ಇರುವ ಅತಿ ಹತ್ತಿರದ ಸಂಪರ್ಕ ರಸ್ತೆಯೆಂದರೆ ಅದು ಭಾಗಮಂಡಲ-ಕರಿಕೆ ರಸ್ತೆ. ಈ ರಸ್ತೆಗೆ ಕಾಯಕಲ್ಪ ನೀಡುವ ಬಗ್ಗೆ ಲೋಕೋಪಯೋಗಿ ಇಲಾಖೆಯಾಗಲಿ, ಕರ್ನಾಟಕ ರಾಜ್ಯ ಸರಕಾರವಾಗಲಿ ಆಸಕ್ತಿ ತೋರುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಭಾಗಮಂಡಲ- ಕರಿಕೆ ರಸ್ತೆಯು ಅಂತಾರಾಜ್ಯ ಸಂಪರ್ಕ ರಸ್ತೆಯಾಗಿದ್ದು ದಕ್ಷಿಣ ಕನ್ನಡ, ಕೊಡಗು, ಕಾಸರಗೋಡು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. 2018ರಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿದುಕೊಂಡಿತ್ತು. ಅಂತಹ ಸಂದರ್ಭದಲ್ಲಿ ಹಲವು ತಿಂಗಳುಗಳ ಕಾಲ ಭಾಗಮಂಡಲ- ಕರಿಕೆ ರಸ್ತೆಯೇ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ರಸ್ತೆಯಾಗಿ ಬಳಕೆಯಾಗಿತ್ತು.

ಆದರೂ ರಸ್ತೆ ಅಭಿವೃದ್ಧಿಗೆ ಸರಕಾರ ಗಮನ ಹರಿಸುತ್ತಿಲ್ಲ, ಈ ಭಾಗದ ರಸ್ತೆ ವಾಹನ ಸಂಚಾರಕ್ಕೆ ಮಾತ್ರವಲ್ಲ ನಡೆದಾಡಲೂ ಯೋಗ್ಯವಿಲ್ಲದಂತಾಗಿದೆ. ಇದನ್ನು ಪ್ರತಿಭಟಿಸಿ ಕರಿಕೆ ವಲಯ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಡಿ.4ರಂದು ಕರಿಕೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಬಾಲಚಂದ್ರನ್ ನಾಯರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು