News Karnataka Kannada
Saturday, May 11 2024
ಕರಾವಳಿ

ಸುಳ್ಯ ಚೆನ್ನಕೇಶವನಿಗೆ ವೈಭವದ ರಥೋತ್ಸವ

Photo Credit :

ಸುಳ್ಯ ಚೆನ್ನಕೇಶವನಿಗೆ ವೈಭವದ ರಥೋತ್ಸವ

ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಬುಧವಾರ ರಾತ್ರಿ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರ ಕಂಠದಿಂದ ಹೊರ ಹೊಮ್ಮಿದ ಚೆನ್ನಕೇಶವನಿಗೆ ಗೋವಿಂದ.. ಗೋವಿಂದ ಜಯ ಘೋಷದ ಮಧ್ಯೆ ರಥೋತ್ಸವ ನಡೆಯಿತು.

ಬುಧವಾರ ರಾತ್ರಿ ದೇವಸ್ಥಾನಕ್ಕೆ ಕಲ್ಕುಡ ಭಂಡಾರ ಆಗಮಿಸಿದ ಬಳಿಕ ವಿಶೇಷ ಪೂಜೆ ಮತ್ತು ಉತ್ಸವ ಬಲಿ ನಡೆದು ಚೆನ್ನಕೇಶವ ದೇವರನ್ನು ರಥದಲ್ಲಿ ಕುಳ್ಳಿರಿಸಲಾಯಿತು. ರಥದಲ್ಲಿ ವಿಶೇಷ ಪೂಜೆಯ ಬಳಿಕ ರಥವು ರಥಬೀದಿಯಲ್ಲಿ ಸಾಗಿತು. ಕಲ್ಕುಡ ದೈವ ಮತ್ತು ಕಾನತ್ತಿಲ ದೈವದ ಕೋಲಗಳು ರಥೋತ್ಸವದ ಜೊತೆಯಲ್ಲಿ ಆಗಮಿಸಿತು. ಸಾವಿರಾರು ಭಕ್ತರ ಮುಗಿಲು ಮುಟ್ಟಿದ ಉದ್ಘಾರದ ಮಧ್ಯೆ ರಥಬೀದಿಯಲ್ಲಿ ಸಾಗಿ ಬಂದ ರಥವು ಮುಖ್ಯ ರಸ್ತೆಯ ದ್ವಾರದ ಬಳಿಯ ಕಟ್ಟೆಯ ಬಳಿಗೆ ಆಗಮಿಸಿತು. ಚೆನ್ನಕೇಶವ ದೇವರನ್ನು ರಥದಿಂದ ಇಳಿಸಿ ಶೃಂಗರಿಸಿದ್ದ ಕಟ್ಟೆಯಲ್ಲಿ ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ನಡೆದು ಪ್ರಸಾದ ವಿತರಿಸಿದ ಬಳಿಕ ದೇವರು ರಥದಲ್ಲಿ ದೇವಾಲಯಕ್ಕೆ ಹಿಂತಿರುಗಿತು. ದೇಲಂಪಾಡಿ ಬಾಲಕೃಷ್ಣ ತಂತಿಗ್ರಳ ನೇತೃತ್ವದದಲ್ಲಿ ಪೂಜಾ ವಿಧಿ ವಿಧಾನಗಳು ನಡೆದು ರಥೋತ್ಸವ ಸಂಪನ್ನಗೊಂಡಿತು.

ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಡಾ. ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮತ್ತು ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಥೋತ್ಸವ ವೀಕ್ಷಿಸಲು ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.

ವಿಶೇಷ ಬಸ್ ವ್ಯವಸ್ಥೆ
ತಡರಾತ್ರಿ ನಡೆದ ರಥೋತ್ಸವ ವೀಕ್ಷಿಸಲು ಆಗಮಿಸಿದ ಭಕ್ತರ ಪ್ರಯಾಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಯ ವತಿಯಿಂದ ವಿಶೇಷ ಬಸ್ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ಜಾತ್ರೋತ್ಸವದ ಪ್ರಯುಕ್ತ ತಾಲೂಕಿನ ಎಲ್ಲಾ ಗ್ರಾಮಗಳಿಗೂ ಕೆ.ಎಸ್.ಆರ್.ಟಿ.ಸಿಯ ವತಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು