Categories: ಕರಾವಳಿ

ಸುಳ್ಯ ನಗರ ಪಂ. ಅಧ್ಯಕ್ಷರಾಗಿ ವಿನಯಕುಮಾರ್ ಕಂದಡ್ಕ ಅವಿರೋಧ ಆಯ್ಕೆ

ಸುಳ್ಯ: ಚುನಾವಣೆ ನಡೆದು ಒಂದೂವರ ವರ್ಷಗಳ ಬಳಿಕ ಸುಳ್ಯ ನಗರ ಪಂಚಾಯಿತಿಗೆ ನೂತನ ಸಾರಥಿಗಳ ಆಯ್ಕೆ ನಡೆದಿದೆ. ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷರಾಗಿ  ವಿನಯಕುಮಾರ್ ಕಂದಡ್ಕ ಹಾಗೂ ಉಪಾಧ್ಯಕ್ಷರಾಗಿ ಸರೋಜಿನಿ ಪೆಲ್ತಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವಿನಯಕುಮಾರ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸರೋಜಿನಿ ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆ ನಡೆಯಿತು. ವಿನಯಕುಮಾರ್ ಅವರನ್ನು ಸದಸ್ಯರಾದ ಬಾಲಕೃಷ್ಣ ರೈ ಸೂಚಿಸಿ, ಸುಧಾಕರ ಅನುಮೋದಿಸಿದರು. ಸರೋಜಿನಿ ಅವರನ್ನು ಸದಸ್ಯರಾದ ಶಶಿಕಲಾ ನೀರಬಿದಿರೆ ಸೂಚಿಸಿ ಶೀಲಾ ಅರುಣ ಕುರುಂಜಿ ಅನುಮೋದಿಸಿದರು.

ತಹಶೀಲ್ದಾರ್ ಅನಂತಶಂಕರ್ ಚುನಾವಣಾಧಿಕಾರಿಯಾಗಿದ್ದರು. ಶಾಸಕ ಎಸ್.ಅಂಗಾರ, ನಗರ  ಪಂಚಾಯಿತಿ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್, ನಗರ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ವಿಭಾಗಕ್ಕೆ ಮೀಸಲಾಗಿದೆ. 2019 ಮೇನಲ್ಲಿ ನಡೆದ ಚುನಾವಣೆಯಲ್ಲಿ 20 ವಾರ್ಡ್‍ಗಳಲ್ಲಿ 14 ಸ್ಥಾನ ಪಡೆದು ಬಿಜೆಪಿ ಸತತ ನಾಲ್ಕನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಕಾಂಗ್ರೆಸ್‍ನ 4 ಮತ್ತು ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ.

ನಗರದ ಅಭಿವೃದ್ಧಿಗೆ ಅನುದಾನ: ಅಂಗಾರ

ಸುಳ್ಯ ನಗರದ ಅಭಿವೃದ್ಧಿಗೆ ಸರಕಾರದಿಂದ ಹೆಚ್ಚಿನ ಅನುದಾನ ಒದಗಿಸಲು ಪ್ರಯತ್ನ ನಡೆಸುವುದಾಗಿ ಶಾಸಕ ಎಸ್.ಅಂಗಾರ ಹೇಳಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು ಎಲ್ಲಾ ಸದಸ್ಯರು ಒಟ್ಟಾಗಿ ನಗರದ ಅಭಿವೃದ್ಧಿಗಾಗಿ ದುಡಿಯಬೇಕು. ಎಲ್ಲಾ ವಾರ್ಡ್‍ಗಳ ಅಭಿವೃದ್ಧಿಗೆ ಪ್ರಯತ್ನ ನಡೆಸಬೇಕು ಎಂದು ಅವರು ಹೇಳಿದರು.

ನೂತನ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಮಾತನಾಡಿ, ಸುಳ್ಯ ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಸೇರಿ ಹಲವಾರು ಸಮಸ್ಯೆಗಳಿವೆ. ಸಮಸ್ಯೆಯ ಮೂಲವನ್ನು ಹುಡುಕಿ  ಪರಿಹಾರಕ್ಕಾಗಿ ಪ್ರಯತ್ನ ನಡೆಸಬೇಕಾಗಿದೆ. ನಗರದ ಮಾಸ್ಟರ್ ಪ್ಲಾನ್ ಜನರಿಗೆ ಹೆಚ್ಚು ಅನುಕೂಲ ಆಗುವ ರೀತಿಯಲ್ಲಿ ರೂಪಿಸಲು ಪ್ರಯತ್ನ ನಡೆಸಲಾಗುವುದು. ನಗರದ ಆದಾಯದ ಮೂಲವನ್ನು ಹೆಚ್ಚಿಸುವ ಪ್ರಯತ್ನ ಆಗಬೇಕಾಗಿದೆ ಎಂದರು.

ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ನಗರ ಪಂಚಾಯಿತಿ ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಸದಸ್ಯರಾದ ಎಂ.ವೆಂಕಪ್ಪ ಗೌಡ, ಕೆ.ಎಸ್.ಉಮ್ಮರ್, ಡೇವಿಡ್ ಧೀರಾ ಕ್ರಾಸ್ತಾ, ಶೀಲಾ ಅರುಣ ಕುರುಂಜಿ, ಶರೀಫ್ ಕಂಠಿ, ಶಶಿಕಲಾ ನೀರಬಿದಿರೆ, ಬುದ್ಧ ನಾಯ್ಕ್ ಮಾತನಾಡಿದರು.

Desk

Recent Posts

ಬಿಸಿಲಿನ ಶಾಖಕ್ಕೆ ರಾಯಚೂರಿನಲ್ಲಿ ಐವರು ಬಲಿ : ಹೊತ್ತಿ ಉರಿದ ಕಾರು

ಜಿಲ್ಲೆಯಲ್ಲಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಸಾಖಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಹಾಗೂ ಶಕ್ತಿನಗರದಲ್ಲಿ ಕಾರಿಗೆ ಬೆಂಕಿ…

10 mins ago

ಇಂದು (ಮೇ 04) ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ

ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು…

11 mins ago

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಬೀದಿ‌ ಕಾಳಗ : ವಿಡಿಯೋ ವೈರಲ್

ಮಂಗಳೂರಿನ ಹೊರ ವಲಯ ವಳಚ್ಚಿಲ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಜಗಳವಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜ್ ಫೆಸ್ಟ್…

31 mins ago

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿ…

32 mins ago

ಕೇಂದ್ರ ಸಚಿವ ಭಗವಂತ ಖೂಖಾ ಒಬ್ಬ ಸುಳ್ಳಿನ ಸರ್ದಾರ : ಖಂಡ್ರೆ ಆರೋಪ

ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಖಾ ವಿರುದ್ದ ಬ್ಯಾಟಿಂಗ್ ಮಾಡಿದ್ದಾರೆ.

53 mins ago

ನಾಟಕ ಪ್ರದರ್ಶನದ ವೇಳೆಯೇ ಕುಸಿದು ಬಿದ್ದು ನಟ ಮೃತ್ಯು

ನಟನೊಬ್ಬ ನಟಿಸುತ್ತಾ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಯಲಹಂಕದ ಸಾತನೂರು ಗ್ರಾಮದಲ್ಲಿ ನಡೆದಿದೆ.

55 mins ago