ಸುಳ್ಯ: ಸುಳ್ಯ ನಗರದ ವಸತಿ ಗೃಹವೊಂದರಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸುಳ್ಯ ತಾಲೂಕಿನ ಐವರ್ನಾಡಿನ ಕಟ್ಟತ್ತಾರಿನ ದರ್ಶನ್(20) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ನಾರ್ಯ ಕಲ್ಕಾಜೆಯ ಇಂದಿರಾ (19) ಆತ್ಮಹತ್ಯೆ ಮಾಡಿ ಕೊಂಡವರು. ಸೋಮವಾರ ಸಂಜೆಯ ವೇಳೆಗೆ ಘಟನೆ ಬೆಳಕಿಗೆ ಬಂದಿದ್ದು ಇಬ್ಬರು ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡ ನೆಲೆಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ ವಸತಿ ಗೃಹದಲ್ಲಿ ಯುವಕ ಕೊಠಡಿ ಕಾದಿರಿಸಿದ್ದ. ಮಂಗಳೂರಿನ ಖಾಸಗೀ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಯುವತಿ ಕೂಡ ಆಗಮಿಸಿದ್ದಳು ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.