Categories: ಕರಾವಳಿ

ಸೆಲ್ಫಿ ಹುಚ್ಚಿಗೆ ಗೃಹರಕ್ಷಕ ಸಿಬ್ಬಂದಿ ಅಮಾನತು!

ಉಡುಪಿ: ಹಲವಾರು ಯುವತಿಯರೊಂದಿಗೆ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಉಡುಪಿ ಜಿಲ್ಲಾ ಪಡುಬಿದ್ರಿ ಘಟಕದಲ್ಲಿ ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.

ಕಾರ್ಕಳ ತಾಲೂಕಿನ ಬೆಳ್ಮಣ್ಣು ಮಂಜರಪಲ್ಕೆ ನಿವಾಸಿ ಸುಜಿತ್ ಶೆಟ್ಟಿ ಎಂಬಾತ ಹೋಮ್ ಗಾರ್ಡ್ ಆಗಿ ಶಿರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಈತ 10ಕ್ಕೂ ಅಧಿಕ ಯುವತಿಯರೊಂದಿಗೆ ವಿವಿಧ ಜಾಗಗಳಲ್ಲಿ ಸೆಲ್ಫಿ ತೆಗೆದು ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದ. ಇದು ಹೆಚ್ಚಿನೆಡೆ ಹರಿದಾಡಿತ್ತು.

ಸ್ವಯಂ ಕ್ರಮ ತೆಗೆದುಕೊಂಡ ಜಿಲ್ಲಾ ಕಮಾಂಡೆಂಟ್ ಡಾ. ಕೆ. ಪ್ರಶಾಂತ್ ಶೆಟ್ಟಿ ಅವರು ಅಮಾನತು ಆದೇಶ ನೀಡಿದ್ದಾರೆ. ಯುವತಿಯರಿಂದ ಯಾವುದೇ ದೂರು ದಾಖಲಾಗದೆ ಇದ್ದರೂ ಯುವತಿಯರ ಮಾನ ಹರಾಜಾದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಇಲಾಖೆಯ ತನಿಖೆ ನಡೆಸುವ ತನಕ ಅಮಾನತು ಮಾಡಲಾಗಿದೆ. ಆದರೆ ಆತನ ವಿರುದ್ಧ ಯಾವುದೇ ರೀತಿಯ ದೂರು ದಾಖಲಾಗಿಲ್ಲ. ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಂಡಿದ್ದೇವೆ ಎಂದು ಡಾ. ಕೆ. ಪ್ರಶಾಂತ್ ಶೆಟ್ಟಿ ಅವರು ತಿಳಿಸಿದ್ದಾರೆ.

ತಾನು ಪೊಲೀಸ್ ಎಂದು ಸುಳ್ಳು ಹೇಳಿ ಯುವತಿಯರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅವರೊಂದಿಗೆ ಚೆಲ್ಲಾಟವಾಡಿ, ಸೆಲ್ಫಿ ತಗೆದುಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ.

ಪ್ರಕರಣವು ಬೆಳಕಿಗೆ ಬರುತ್ತಿದ್ದಂತೆ ಸುಜಿತ್ ಶೆಟ್ಟಿ ತಲೆಮರೆಸಿಕೊಂಡಿದ್ದು, ಉಡುಪಿ ಪೊಲೀಸರು ಆತನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

Desk

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

11 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

31 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago