ಹಾರ ಬೇಡ ಕನ್ನಡ ಪುಸ್ತಕ ಕೊಡಿ: ಸಚಿವ ಸುನೀಲ್ ಕುಮಾರ್

ಬೆಂಗಳೂರು: ‘ನನ್ನನ್ನು ಅಭಿನಂದಿಸಲು ಬರುವವರು ಹಾರ– ತುರಾಯಿಗಳನ್ನು ತರುವುದು ಬೇಡ. ಕೊಡಲೇಬೇಕು ಎಂದಿದ್ದರೆ, ಒಂದು ಕನ್ನಡ ಪುಸ್ತಕ ಕೊಡಿ’ ಎಂದು ಕಾರ್ಕಳ ಶಾಸಕ, ನೂತನ ಸಚಿವ ವಿ.ಸುನೀಲ್‌ಕುಮಾರ್‌ ತಿಳಿಸಿದ್ದಾರೆ.

‘ನೀವು ಕೊಟ್ಟ ಪುಸ್ತಕವನ್ನು ಕಾರ್ಕಳದ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡುತ್ತೇನೆ. ಇದರಿಂದ ನನ್ನ ಮತ ಕ್ಷೇತ್ರದ ವಿದ್ಯಾರ್ಥಿಗಳಿಗೆ ಮತ್ತು ಜ್ಞಾನ ದಾಹಿಗಳಿಗೆ ಪ್ರಯೋಜನ ಆಗುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹಾರ ತುರಾಯಿಗಳನ್ನು ನೀಡಬಾರದು. ಅದರ ಬದಲಿಗೆ ಒಂದು ಕೆ.ಜಿ ‘ಕಾರ್ಲ ಕಜೆ’ ಎಂಬ ಸ್ಥಳೀಯ ತಳಿಯ ಕೆಂಪು ಅಕ್ಕಿಯನ್ನು ನೀಡುವಂತೆ ಸುನೀಲ್‌ ಸಲಹೆ ನೀಡಿದ್ದೂ ಅಲ್ಲದೆ, ಅಕ್ಕಿಯನ್ನು ಕೊಡುಗೆಯಾಗಿ ನೀಡುವ ಪರಿಪಾಟವನ್ನೂ ಆರಂಭಿಸಿದರು. ಈ ಬಾರಿ ಮುಂಗಾರು ಆರಂಭದಲ್ಲಿ ಕಾರ್ಕಳ ಮೂಲದ ಬಿಳಿ ಬೆಂಡೆ ಬೀಜವನ್ನು ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಿ ಅದನ್ನು ಎಲ್ಲರೂ ಬೆಳೆಯುವಂತೆ ಪ್ರೋತ್ಸಾಹ ನೀಡಿದ್ದರು.

Sampriya YK

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

37 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

60 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago