News Karnataka Kannada
Monday, May 06 2024
ಕರಾವಳಿ

ಹಿಂಜಾವೇ ತಾಲೂಕು ಕಾರ್ಯದರ್ಶಿ ಕೊಲೆ ಪ್ರಕರಣ: ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ

Photo Credit :

ಹಿಂಜಾವೇ ತಾಲೂಕು ಕಾರ್ಯದರ್ಶಿ ಕೊಲೆ ಪ್ರಕರಣ: ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ

ಪುತ್ತೂರು: ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸೆ.3ರಂದು ರಾತ್ರಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನವನ್ನು ವೀಕ್ಷಿಸುತ್ತಿದ್ದ ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ(27)ರವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಸೆ.21ರ ತನಕ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಗಳಾದ ಆರ್ಯಾಪು ಗ್ರಾಮದ ಚರಣ್‍ರಾಜ್ ರೈ(26), ಚರಣ್‍ರಾಜ್ ರೈಯ ಸಹೋದರ ಕಿರಣ್ ರೈ(36) ಮತ್ತು ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್ ಶೆಟ್ಟಿ(28) ಮತ್ತು ಈ ಮೂವರು ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಬಂಧಿತರಾಗಿದ್ದ ಮಂಗಳೂರು ಅತ್ತಾವರದ ಸ್ವೀವನ್ ಮೊಂತೆರೋರವರನ್ನು ಸೆ.6ರಂದು ಬೆಳಗ್ಗೆ ಪೊಲೀಸರು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಸೆ.21ರ ತನಕ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
188

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು