ಮಂಗಳೂರು: ಯುವತಿ ಮೇಲೆ ಗ್ಯಾಂಗ್ ರೇಪ್ ಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯ ಬೆಂಗ್ರೆ ಕಡಲ ತೀರ ಬಳಿ ವಾರಗಳ ಹಿಂದೆ ನಡೆದಿತ್ತು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಮೂಲದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಇದೀಗ ಪೊಲೀಸರು ಆರು ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಯುವಕನ ಜೊತೆಗೆ ವಿಹಾರಕ್ಕೆ ಬಂದಿದ್ದ ಬಂಟ್ವಾಳ ಮೂಲದ ಯುವಜೋಡಿ ಮೇಲೆ ಹಲ್ಲೆ ನಡೆಸಿ ನಂತರ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ನೀಡಲಾಗಿದೆ.
ಏಳು ಮಂದಿ ದುಷ್ಕರ್ಮಿಗಳಿಂದ ಅತ್ಯಾಚಾರ ಯತ್ನ ನಡೆದಿದ್ದು, ತಡವಾಗಿ ದೂರು ದಾಖಲಾಗಿದೆ.
ಘಟನೆ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರೋಪಿಗಳ ಬಂಧನಕ್ಕೆ ಬಲೆ ಬೀಸಿದ ಮಂಗಳೂರು ಪೊಲೀಸರು ಈಗಾಗಲೇ ಆರು ಮಂದಿಯನ್ನು ವಿಚಾರಣೆಗೆ ಒಳಪಡಿಸಿ ಆರೋಪಿಗಳ ಪತ್ತೆಗಾಗಿ ಹುಡುಕಾಟ ಆರಂಭಿಸಿದ್ದಾರೆ.