Categories: ಕರಾವಳಿ

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ, ಮಡಿದವರಿಗೆ ಶ್ರದ್ಧಾಂಜಲಿ

ಮಂಗಳೂರು: ಮಂಗಳೂರು ವಿಮಾನ ದುರಂತಕ್ಕೆ 13 ವರುಷ…  2010 ಮೇ.22ರಂದು ಮಂಗಳೂರಿನ ಕೆಂಜಾರು ಎಂಬಲ್ಲಿ ಟೇಬಲ್ ಟಾಪ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರಪಾತಕ್ಕೆ ಬಿದ್ದಿತ್ತು. ಪೈಲಟ್ ನಿದ್ದೆಗೆ ಜಾರಿದ್ದು ಇದಕ್ಕೆ ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿತ್ತು. ದುರಂತ ನಡೆದು ಇಂದಿಗೆ 13 ವರ್ಷವಾಗಿದ್ದು, ಇಂದಿಗೆ ಸರಿಯಾಗಿ 13 ವರ್ಷಗಳ ಹಿಂದೆ ಮಂಗಳೂರು ಬಜಪೆ ಸಮೀಪ ಕೆಂಜಾರು ಎಂಬಲ್ಲಿ ನಡೆದ ದುರ್ಘಟನೆಯಲ್ಲಿ  158 ಮಂದಿ ಸುಟ್ಟು ಕರಕಲಾಗಿದ್ದರು. 135 ಮಂದಿ ವಯಸ್ಕರು, 19 ಮಕ್ಕಳು, 4 ಶಿಶುಗಳು, 6 ಮಂದಿ ವಿಮಾನ ಸಿಬ್ಬಂದಿ ಸೇರಿ 166 ಮಂದಿ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್,  ಅಂದು ಬೆಳಗ್ಗೆ 6.15ಕ್ಕೆ ವಿಮಾನ ಅಪಘಾತಕ್ಕೀಡಾಯಿತು. ದುರಂತದಲ್ಲಿ ಪೈಲಟ್, ಸಿಬಂದಿ ಸೇರಿ 158 ಮಂದಿ ಸಾವನ್ನಪ್ಪಿದ್ದರು. ಮೃತಪಟ್ಟವರಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯವರಲ್ಲದೆ, ಕೇರಳದವರೂ ಸಾಕಷ್ಟು ಸಂಖ್ಯೆಯಲ್ಲಿದ್ದರು.

ದುಬೈನಿಂದ ರಾತ್ರಿ 1.20ಕ್ಕೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹೊರಟಿತ್ತು. ಬೆಳಗ್ಗೆ ಸುರಕ್ಷಿತವಾಗಿ ಮಂಗಳೂರು ತಲುಪಬೇಕಿತ್ತು. ಮಂಗಳೂರಿನ ಹೊರವಲಯದ ಕೆಂಜಾರು ವಿಮಾನ ನಿಲ್ದಾಣ ಲ್ಯಾಂಡ್ ಆಗುವ ಸಂದರ್ಭ ಟೇಬಲ್ ಟಾಪ್ ಲ್ಯಾಂಡಿಂಗ್ ನಲ್ಲಿ ಲೆಕ್ಕಾಚಾರ ತಪ್ಪಿ, ರನ್ ವೇಯಿಂದ ಜಾರಿ ಕಣಿವೆಗೆ ವಿಮಾನ ಭಾರೀ ಸದ್ದಿನೊಂದಿಗೆ ಬಿದ್ದಿತ್ತು. ಆ ಸಂದರ್ಭ ಬೆಂಕಿ ಹತ್ತಿಕೊಂಡಿತ್ತು. ಬೀಳುವಾಗ ಇಬ್ಬಾಗಗೊಂಡ ವಿಮಾನದಿಂದ ಎಂಟು ಮಂದಿ ಜಿಗಿದು ಪಾರಾಗಿದ್ದರು. ದುರಂತದಲ್ಲಿ ಸಾವನ್ನಪ್ಪಿದ 22 ಮಂದಿಯ ಗುರುತೂ ಸಿಗದಂಥ ಪರಿಸ್ಥಿತಿ ಇತ್ತು. ಬಳಿಕ ಡಿ.ಎನ್.ಎ. ಪರೀಕ್ಷೆ ಮಾಡಿಸಲಾಯಿತು. ಇಂದು ಕುಳೂರು ನದಿ ತಟದಲ್ಲಿ ನಿರ್ಮಿಸಿದ ಸ್ಮಾರಕ ದಲ್ಲಿ ಮಡಿದವರಿಗೆ  ಶ್ರದ್ಧಾಂಜಲಿ ಜರಗಿತು.  ವಿಮಾನ ದುರಂತದಿಂದ ಕೆಲವರ ಮೃತದೇಹ ಗುರುತುಪತ್ತೆಯಾಗದೆ ಉಳಿದ ಸಂದರ್ಭ ಮಂಗಳೂರಿನ  ಕುಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಆ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ಅನ್ನು ನಿರ್ಮಿಸಲಾಗಿದೆ. ಅಲ್ಲಿ ಪ್ರತಿ ವರ್ಷ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿಯನ್ನು ಮೇ.22ರಂದು ಬೆಳಗ್ಗೆ ಸಲ್ಲಿಸಲಾಗುತ್ತದೆ.  ಈ ಸಂದರ್ಭ ದ.ಕ‌ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್  ಮಾತನಾಡಿದರು.

Umesha HS

Recent Posts

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

6 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

18 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

21 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

36 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

51 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

59 mins ago