News Karnataka Kannada
Monday, April 29 2024
ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆ: 3 ಕ್ಷೇತ್ರಗಳ ಆಮ್‌ ಆದ್ಮಿ ಅಭ್ಯರ್ಥಿಗಳ ಘೋಷಣೆ

Announcement of Aam Aadmi candidates for 3 constituencies in Dakshina Kannada district Open in G
Photo Credit : News Kannada

ಮಂಗಳೂರು: ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿಪಕ್ಷದಿಂದ ಪಕ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂತೋಷ್ ಕಾಮತ್, ಮೂಡುಬಿದಿರೆ ಕ್ಷೇತ್ರಕ್ಕೆ ವಿಜಯನಾಥ್ ವಿಠಲ ಶೆಟ್ಟಿ, ಸುಳ್ಯಕ್ಕೆ ಸುಮನಾ ಬೆಳ್ಳಾರ್ಕರ್ ಅವರ ಹೆಸರನ್ನು ಪ್ರಕಟಿಸಲಾಗಿದೆ ಎಂದು ಆಮ್ ಆದ್ಮಪಾರ್ಟಿ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಎಡಮಲೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಲ್ಲಿ 80 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಸಂತೋಷ್ ಕಾಮತ್  ಮಂಗಳೂರಿನಲ್ಲಿ ಉದ್ಯಮಿಯಾಗಿದ್ದು,  ಲಾಕ್‌ಡೌನ್‌ ದಿನಗಳಲ್ಲಿ ವ್ಯಾಪಾರಿಗಳ ಧ್ವನಿಯಾಗಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಆಮ್ ಆದ್ಮಿ  ಪಕ್ಷದ ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ರಾಜ್ಯ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿದ್ದಾರೆ. ಉದ್ಯಮಿ ವಿಜಯನಾಥ ವಿಠಲ ಶೆಟ್ಟಿ ಅವರು ಎಡಪದವು ಶಾಸ್ತಾವು ಭೂತನಾಥೇಶ್ವರ ದೇವಸ್ಥಾನ ಮತ್ತು ಟ್ರಸ್ಟಿನ ಮುಖ್ಯ ಸಂಚಾಲಕರಾಗಿದ್ದಾರೆ. ಬಜ್ಪೆ  ಬಂಟರ ಸಂಘದ ಗೌರವಾಧ್ಯಕ್ಷ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಯ ಕ್ಷೇತ್ರದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಅವರು ಸುಳ್ಯದ ಮಾಜಿ ಶಾಸಕ ಕೆ.ಕುಶಲ ಅವರ ಪುತ್ರಿ. ಎಂಬಿಎ ಪದವೀಧರೆಯಾಗಿದ್ದು ಕೋವಿಡ್‌ ಸಮಯದಲ್ಲಿ ಜನಹಿತ ಕಾರ್ಯಕ್ರಮ ನಡೆಸಿ ಹೆಸರು ಗಳಿಸಿದ್ದಾರೆ ಎಂದು ಹೇಳಿದರು. ಪಕ್ಷದ ವತಿಯಿಂದ ಜಿಲ್ಲೆಯಾದ್ಯಂತ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸಿ ಮನೆ ಮನೆ ಪ್ರಚಾರ ನಡೆಸಲಾಗುತ್ತಿದೆ. ಅರವಿಂದ ಕೇಜಿವಾಲ್ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಆಪ್ ಹೊಸ ಅಲೆ ಸೃಷ್ಟಿಸಲಿದ್ದು, ಪ್ರಾಮಾಣಿಕ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡಲಿದೆ ಎಂದರು. ಅಭ್ಯರ್ಥಿಗಳಾದ ಸುಮನಾ ಬೆಳ್ಳಾರ್ಕರ್, ವಿಜಯನಾಥ ವಿಠಲ ಶೆಟ್ಟಿ, ಆಪ್ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ವೆಂಕಟೇಶ ಬಾಳಿಗಾ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು