Categories: ಕರಾವಳಿ

ಬಂಟ್ವಾಳ: ನಾರಾಯಣಗುರುಗಳಿಗೆ ಗೌರವ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದ ನಳಿನ್ ಕುಮಾರ್

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಪಾಲಿಸುವ ಮೂಲಕ, ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲಾಗುತ್ತಿದ್ದು, ಅವರಿಗೆ ಗೌರವ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವತಿಯಿಂದ  ಭಾನುವಾರ ಬಿ.ಸಿ.ರೋಡಿನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆದ  ಬ್ರಹ್ಮಶ್ರೀ ನಾರಾಯಣ ಗುರುವರ್ಯರ ೧೬೮ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ವಿವಿಧ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ನಾರಾಯಣಗುರುಗಳು ಜಗತ್ತಿನ ಗುರುಗಳು. ಅವರ ಚಿಂತನೆಗಳು ಚರ್ಚೆಗಷ್ಟೇ ಸೀಮಿತವಾಗದೆ ನಿರಂತರವಾಗಿ ಹೃದಯದಲ್ಲಿರಬೇಕು ಎಂದು ನಳಿನ್ ಹೇಳಿದರು.

ಕನ್ಯಾಡಿ ಧರ್ಮಸ್ಥಳದ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಸನಾತನ ಧರ್ಮ ಎಂಬುದು ಬದುಕಿನ ಸಂವಿಧಾನ. ಸತ್ಯದ ಮೌಲ್ಯ ನೀಡಿದವರು ಬ್ರಹ್ಮಶ್ರೀ ನಾರಾಯಣಗುರುಗಳು, ಅವರ ವಿಚಾರದಲ್ಲಿ ಪಕ್ಷ ರಾಜಕೀಯ ದೂರವಿಡಬೇಕು ಎಂದ ಅವರು ಎಲ್ಲರೂ ರಾಷ್ಟ್ರೀಯತೆಗೆ ಅದ್ಯತೆ ನೀಡಿ ಮುನ್ನಡೆಯುವಂತೆ ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪೂರ್ವಾಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್‌, ರಾಜ್ಯ ಸರಕಾರ ನಾರಾಯಣಗುರು ಜಯಂತಿ ಆಚರಣೆ ನಡೆಸಲು ತಾನು ಪ್ರಸ್ತಾವಿಸಿದ್ದೆ ಎಂದು ಸ್ಮರಿಸಿದರು. ನಾರಾಯಣಗುರುಗಳು ಒಂದು ಜಾತಿಗೆ ಸೀಮಿತವಾದವರಲ್ಲ ಎಂದ ಅವರು, ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಗೆ ಜನಸ್ತೋಮವೇ ಸೇರಿದ್ದು ಇದಕ್ಕೆ ಸಾಕ್ಷಿ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಮುಖ್ಯ ಅತಿಥಿಗಳಾಗಿದ್ದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎನ್.ಮಹಾಬಲ ಬಂಗೇರ, ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ, ಜತೆ ಕಾರ್ಯದರ್ಶಿ ಆನಂದ ಸಾಲಿಯಾನ್ ಶಂಭೂರು, ಕೋಶಾಧಿಕಾರಿ ಉಮೇಶ್ ಸುವರ್ಣ, ಲೆಕ್ಕಪರಿಶೋಧಕ, ನ್ಯಾಯವಾದಿ ಸತೀಶ್ ಬಿ, ಮಹಿಳಾ ಸಮಿತಿ ಅಧ್ಯಕ್ಷೆ ರೇವತಿ ಬಡಗಬೆಳ್ಳೂರು ಉಪಸ್ಥಿತರಿದ್ದರು.

ಈ ಸಂದರ್ಭ ಜಿಪಂ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ಶೈಲಜಾ ರಾಜೇಶ್, ಬಿ.ಸಿ.ರೋಡ್            ಶ್ರೀ ರಣೇಶ್ವರಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ ಅವರನ್ನು ಸನ್ಮಾನಿಸಲಾಯಿತು. ವಿದುಷಿ ಡಾ.ದಾಕ್ಷಾಯಿಣಿ ಕಂದೂರು, ಸ್ವಾತಿ ಕುದ್ರೋಳಿ ಅವರನ್ನು ಅಭಿನಂದಿಸಲಾಯಿತು. ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.

ಮಧ್ಯಾಹ್ನ ಬಿಲ್ಲವ ಮಹಿಳಾ ಸಮಿತಿ ಮತ್ತು ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಸಹಯೋಗದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಬೆಳಗ್ಗೆ ಭಜನೆ, ಗುರುಪೂಜೆ, ಮಹಾಪೂಜೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. 25 ವರ್ಷಗಳಿಂದ ಯಶಸ್ವಿಯಾಗಿ ಅಧ್ಯಕ್ಷರಾಗಿರುವ ಸೇಸಪ್ಪ ಕೋಟ್ಯಾನ್‌ ಅವರನ್ನು ಅಭಿನಂದಿಸಲಾಯಿತು.

Sushma K

Recent Posts

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 min ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

8 mins ago

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…

18 mins ago

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

27 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

28 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

40 mins ago