News Karnataka Kannada
Friday, May 03 2024
ಕರಾವಳಿ

ಬೆಳ್ತಂಗಡಿ: ಬಂಡಾಜೆ ಫಾಲ್ಸ್‌ ಗೆ ಟ್ರೆಕ್ಕಿಂಗ್‌ ಬಂದು ದಾರಿತಪ್ಪಿದ ಯುವಕ

Belthangady: Man goes astray while trekking to Bandaje Falls
Photo Credit : News Kannada

ಬೆಳ್ತಂಗಡಿ: ಬಂಡಾಜೆ ಫಾಲ್ಸ್‌ ಕಡೆ ಟ್ರೆಕ್ಕಿಂಗ್‌ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾದ ಘಟನೆ ರವಿವಾರ ನಡೆದಿದೆ. ಬೆಂಗಳೂರು ಜೆಪಿ ನಗರದ ಪರೋಸ್‌ ಅಗರ್ವಾಲ್‌ ಎಂದು ಹೇಳಲಾಗಿರುವ ಯುವಕ ರಾಣಿಝರಿ ಸಮೀಪದವರೆಗೆ ಬೈಕ್‌ನಲ್ಲಿ ಬಂದಿದ್ದು ಇಲ್ಲಿಂದ ಬಂಡಾಜೆ ಫಾಲ್ಸ್‌ನ ಬದಿಯಿಂದ ಟ್ರೆಕ್ಕಿಂಗ್‌ ನಡೆಸಲು ಮುಂದಾಗಿದ್ದಾನೆ.

ಆದರೆ ಸಂಜೆಯಾಗುತ್ತಿದ್ದಂತೆ ದಾರಿ ತಪ್ಪಿದ್ದು ಪೊಲೀಸ್‌ ಕಂಟ್ರೋಲ್‌ ರೂಂಗೆ ದೂರವಾಣಿ ಕರೆ ಮಾಡಿದ್ದಾನೆ. ಆದರೆ ಆತನಿರುವ ಸ್ಥಳ ಪತ್ತೆ ಹಚ್ಚಲು ಕ್ಲಿಷ್ಟ ಪರಿಸ್ಥಿತಿ ಇದೆ. ಇಲ್ಲಿನ ಪರಿಸರದಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಿಗದಿರುವುದು, ಸಂಪೂರ್ಣ ಅರಣ್ಯ ಪ್ರದೇಶವಾದ ಕಾರಣ ಹಾಗೂ ಜಾರುವ ಬಂಡೆಗಳು ಇರುವುದರಿಂದ ಈತ ಇರಬಹುದಾದ ನಿಗದಿತ ಸ್ಥಳ ಹುಡುಕಲು ಹರಸಾಹಸ ನಡೆಸಬೇಕಾಗಿದೆ.

ಈಗಾಗಲೇ ಬಾಳೂರು ಪೊಲೀಸರು ಬಂಡಾಜೆ ಫಾಲ್ಸ್‌ನ ತಮ್ಮ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಫಾಲ್ಸ್‌ನ ತಳ ಹಾಗೂ ಇತರ ಕೆಲವು ಭಾಗಗಳು ದ.ಕ. ಜಿಲ್ಲೆ ವ್ಯಾಪ್ತಿಯಲ್ಲಿದ್ದು ಇಲ್ಲಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಸಿಬಂದಿ ಹುಡುಕಾಟ ಮುಂದುವರಿಸಿದ್ದಾರೆ. ಆಗಾಗ ಮೊಬೈಲ್‌ ಕರೆಗೆ ಸಿಗುತ್ತಿರುವ ಯುವಕನಿಗೆ ಪೊಲೀಸರು ಮತ್ತು ಅರಣ್ಯ ಇಲಾಖೆ, ಧೈರ್ಯ ತುಂಬಿದ್ದು ಹುಡುಕಾಟ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು