Categories: ಕರಾವಳಿ

ಬೆಂಗಳೂರು ಕಂಬಳ: ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ ಭಾಗಿ, ₹1 ಕೋಟಿ ಘೋಷಿಸಿದ ಸಿಎಂ

ಬೆಂಗಳೂರು: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯಲಿದ್ದು, ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಕಂಬಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ ಎಂದು ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್‌ ಶೆಟ್ಟಿ ಅವರು ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಪ್ರಕಾಶ್‌ ಶೆಟ್ಟಿ ಅವರು ಮಾತನಾಡಿದರು.

ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದು ಹೇಳಿದರು.

ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು, ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ತಿಳಿಸಿದರು.

ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ಮಾತನಾಡಿ, ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲಾ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ, ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು.

ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಮಾತನಾಡಿ, ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಹೇಳಿದರು.

Ramya Bolantoor

Recent Posts

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

21 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

33 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

48 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

1 hour ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago