ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರನ ಅಂಗಾಂಗ ದಾನ, ಸಂತ್ರಸ್ತ ಕುಟುಂಬಕ್ಕೆ ಖಾದರ್‌ ನೆರವು

ಉಳ್ಳಾಲ: ಬಸ್ಸಿನಿಂದ ಎಸೆಯಲ್ಪಟ್ಟ ಪಿ.ಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದ ಪರಿಣಾಮ ಪೋಷಕರು ಆತನ ಅಂಗಾಂಗ ದಾನ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದರು. ಸಂತ್ರಸ್ತ ಕುಟುಂಬಕ್ಕೆ ಶಾಸಕ ಯು.ಟಿ.ಖಾದರ್ ಅವರು ಮುಖ್ಯಮಂತ್ರಿಯವರ ವಿಶೇಷ ಅನುದಾನದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲು ಕ್ರಮ ಕೈಗೊಂಡಿದ್ದಾರೆ.

ಉಳ್ಳಾಲ ಮಾಸ್ತಿಕಟ್ಟೆ,ಬೈದೆರೆಪಾಲು ನಿವಾಸಿಗಳಾದ ತ್ಯಾಗರಾಜ್ ,ಮಮತಾ ಕರ್ಕೇರ ದಂಪತಿಯ ಪ್ರಥಮ ಪುತ್ರ ಯಶರಾಜ್(16)ಕಳೆದ ಸೆ.7 ರಂದು ಬೆಳಿಗ್ಗೆ ಉಳ್ಳಾಲದಿಂದ ಸಿಟಿ ಬಸ್ಸಲ್ಲಿ ಮಂಗಳೂರಿನ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಿಂದ ಹೊರಗೆಸೆಯಲ್ಪಟ್ಟಿದ್ದರು. ತಲೆಗೆ ಗಂಭೀರ ಗಾಯಗೊಂಡ ಯಶರಾಜನ್ನು ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಸೆ.13 ರಂದು ಮಧ್ಯಾಹ್ನ ಯಶರಾಜ್ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ವೈದ್ಯರು ಘೋಷಿಸಿದ್ದರು.

ಪೋಷಕರ ನಿರ್ಧಾರದಂತೆ ಯಶರಾಜ್ ಅಂಗಾಂಗಗಳನ್ನ ದಾನ ಮಾಡಲಾಗಿತ್ತು.ಸಾವಲ್ಲೂ ಸಾರ್ಥಕತೆ ಮೆರೆದ ಯಶರಾಜ್ ಮನೆಗೆ ಭೇಟಿ ನೀಡಿದ ಶಾಸಕ ಖಾದರ್ ಅವರು ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ‌ ಪರಿಹಾರ ಕೊಡಿಸುವುದಾಗಿ ಮಾತು ಕೊಟ್ಟಿದ್ದಲ್ಲದೆ ತನ್ನ ಆಪ್ತ ಸಹಾಯಕರ ಮೂಲಕವೇ ಎಲ್ಲಾ ದಾಖಲೆಗಳನ್ನು ಸರಕಾರಕ್ಕೆ ಸಲ್ಲಿಸಿದ್ದರು.ಇದೀಗ ಯಶರಾಜ್ ತಂದೆ ತ್ಯಾಗರಾಜ್ ಅವರ ಬ್ಯಾಂಕ್ ಖಾತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ 5 ಲಕ್ಷ ರೂಪಾಯಿ ಜಮೆ‌ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ತ್ಯಾಗರಾಜ್ ಅವರು ನೊಂದ ಕುಟುಂಬಕ್ಕೆ ಕೇಳದೆನೆ ಬಂದು ಪರಿಹಾರ ಒದಗಿಸಿ ಕೊಟ್ಟ ಶಾಸಕ ಖಾದರ್ ಅವರ ಸರಳತೆ, ಕಾಳಜಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಅಂಗಾಂಗ ದಾನ ಎಂಬುದು ಭಾವನಾತ್ಮಕ ವಿಚಾರ.ಇದರ ಬಗ್ಗೆ ಜನಜಾಗೃತಿ ಮೂಡಿಸಬೇಕು. ಯಶರಾಜ್ ಮೆದುಳು ನಿಷ್ಕ್ರಿಯಗೊಂಡಿದ್ದ ಸಂದರ್ಭದಲ್ಲಿ ಆತನ ಕುಟಂಬದವರು ಅಂಗಾಂಗ ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದರು. ಆತನಿಂದ ಇವತ್ತು ಆರು ಜನ ಜೀವಿಸುವಂತಾಗಿದೆ. ಮನೆ ಮಗನನ್ನು ಕಳೆದುಕೊಂಡ  ಕುಟಂಬಕ್ಕೆ ಎಷ್ಟು ಹಣ ಕೊಟ್ಟರೂ ಕಡಿಮೆಯೇ . ಅವರನ್ನ ಅಭಿನಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮಾತನಾಡಿ ಪರಿಹಾರ ಕೊಡಿಸಿದ್ದೇನೆ. ಇತ್ತೀಚಿಗೆ ಕುತ್ತಾರಲ್ಲಿ ನಡೆದ ಅಪಘಾತದಲ್ಲಿ ಕಲ್ಲಾಪಿನ ಭೂಷಣ್ ರೈ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡು ಅಂಗಾಂಗ ದಾನ ಮಾಡಲಾಗಿತ್ತು. ಆತನ ಬಡ ಕುಟುಂಬಕ್ಕೂ ಸಹಾಯವಾಗುವ ನಿಟ್ಟಿನಲ್ಲಿ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು ಶೀಘ್ರನೆ ಹಣ ಬಿಡುಗಡೆಯಾಗುವುದೆಂದು ಖಾದರ್ ಹೇಳಿದ್ದಾರೆ.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago