ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಮುಲ್ಲಯ್ಯ ಮುಲಿಯಾನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈಗಿನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರನ್ನು ವರ್ಗಾವಣೆ ಮಾಡಿದ್ದು, ಅವರಿಗೆ ಸ್ಥಾನ ನಿಯುಕ್ತಿಗೊಳಿಸಿಲ್ಲ. ಇದರ ಜತೆಗೆ ದಕ ಜಿ.ಪಂ. ಸಿಇಒ ಡಾ.ಕುಮಾರ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಮಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಚೆನ್ನಬಸಪ್ಪ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಸಿಇಒ ವರ್ಗಾವಣೆ: ಡಿಸಿಯಾಗಿ ಮುಲ್ಲಯ್ಯ ಮುಲಿಯಾನ್ ನೇಮಕ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.