News Karnataka Kannada
Monday, April 29 2024
ಕರಾವಳಿ

ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Establishment of Narayanguru Development Corporation: Official Order from State Govt
Photo Credit : News Kannada

ಉಡುಪಿ: ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ  ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದ ಹಿಂದುಳಿದ ಜಾತಿಗಳ ಪೈಕಿ‌ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇ ಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು.

ಕೆಲ ದಿನಗಳ ಹಿಂದಷ್ಟೇ ಸಚಿವ ವಿ. ಸುನೀಲ್ ಕುಮಾರ್  ಅವರು ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರ ಜತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ನಿಗಮ ಸ್ಥಾಪನೆ ಮಾಡುವಂತೆ ಮನವಿ ಸಲ್ಲಿಸಿದ್ದರು. ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ನೀಡಿದ ಭರವಸೆ ಈಗ ಕಾರ್ಯ ರೂಪಕ್ಕೆ ಬಂದಿದೆ.

ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ಪಂದಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ಇದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.
ವಿ ಸುನೀಲ್ ಕುಮಾರ್, ಇಂಧನ ಮತ್ತು ಕನ್ನಡ ಸಂಸ್ಕ್ರತಿ ಸಚಿವರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು