Categories: ಕರಾವಳಿ

ಯಕ್ಷಸಿರಿ ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವ

ಸುರತ್ಕಲ್ : ಯಕ್ಷ ಶಿಕ್ಷಣ ದೇವರ ಪೂಜೆಗೆ ಸಮಾನ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ 40 ಸರಕಾರಿ ಶಾಲೆಗಳ 4 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಯಕ್ಷ ಶಿಕ್ಷಣ ನೀಡಲಾಗುತ್ತಿದೆ. ಯಕ್ಷಗುರು ರಾಕೇಶ್ ರೈ ಅಡ್ಕ ಜಿಲ್ಲೆಯ ಅಗಮಾನ್ಯ ಯಕ್ಷಗಾನ ಗುರುಗಳಲ್ಲಿ ಒಬ್ಬರಾಗಿದ್ದಾರೆ, ” ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಹೇಳಿದರು. ಸುರತ್ಕಲ್ ಬಂಟರ ಸಂಘ ವತಿಯಿಂದ ನಡೆಯುತ್ತಿರುವ ಯಕ್ಷಸಿರಿ ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.

ಸುರತ್ಕಲ್ ಬಂಟರ ಸಂಘ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಿದ್ದರು. ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ್ ಶೆಟ್ಟಿ ಕಟ್ಲ ಪ್ರಾಸ್ತಾವಿಕ ಮಾತನಡಿದರು. ಸಂಘದ ನಿಕಟ ಪೂರ್ವಾಧ್ಯಕ್ಷ ಸುಧಾಕರ್ ಎಸ್. ಪೂಂಜ, ಮಾಜಿ – ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಕೇಸರಿ ಎಸ್‌.ಪೂಂಜ, ಜಗನ್ನಾಥ ಶೆಟ್ಟಿ ಬಾಳ, ಯಕ್ಷಸಿರಿ ಸಂಘಟಕಿ ಕವಿತಾ ಪುಷ್ಪರಾಜ್ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

ಯಕ್ಷಮಿತ್ರರು ಸುರತ್ಕಲ್ ಇದರ ಅಧ್ಯಕ್ಷ ಜಗದೀಪ್ ಶೆಟ್ಟಿ, ಉದ್ಯಮಿಗಳಾದ ಪುಂಡಲೀಕ್ ಹೊಸಬೆಟ್ಟು, ಹರೀಶ್ ಶೆಟ್ಟಿ ಪೆರ್ಮುದೆ, ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯಾ ಎ, ಶೆಟ್ಟಿ, ಯಕ್ಷಗುರು ರಾಕೇಶ್ ರೈ ಅಡ್ಕ, ಬಂಟರ ಸಂಘದ ಪದಾಧಿಕಾರಿಗಳಾದ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪುಷ್ಪರಾಜ ಶೆಟ್ಟಿ ಮಧ್ಯ, ಅವಿನಾಶ್ ಶೆಟ್ಟಿ, ಜಯರಾಮ್‌ ಶೆಟ್ಟಿ ಮತ್ತಿತರರಿದ್ದರು. ಕೇಂದ್ರದ ವಿದ್ಯಾರ್ಥಿಗಳು ಹಾಗೂ ಇತರ ಕಲಾವಿದರಿಂದ ಮಾತೃಕಾ ಮಹಿಮೆ ಯಕ್ಷಗಾನ ಬಯಲಾಟ ನಡೆಯಿತು. ಲೀಲಾಧರ ಶೆಟ್ಟಿ ಸ್ವಾಗತಿಸಿ, ಜಯರಾಮ ಶೆಟ್ಟಿ ವಂದಿಸಿದರು. ಅಕ್ಷತಾ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರ್ವಹಿಸಿದರು.

Ramya Bolantoor

Recent Posts

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

21 seconds ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

30 seconds ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

15 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

21 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

34 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

52 mins ago