Categories: ಕರಾವಳಿ

ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಭರವಸೆ ಈಡೇರಿಕೆ: ರಾಹುಲ್‌ ಗಾಂಧಿ

ನವದೆಹಲಿ: ಬಡವರು ಕರ್ನಾಟಕದಲ್ಲಿ ಕ್ರೂರ ಬಂಡವಾಳಶಾಹಿಗಳನ್ನು ಸೋಲಿಸಿದ್ದಾರೆ. ನಾವು ಕರ್ನಾಟಕದ ಜನರ ಪರವಾಗಿ ನಿಂತಿದ್ದೇವೆ. ನಾವು ದ್ವೇಷವನ್ನು ಬಳಸಿಕೊಂಡು ಈ ಯುದ್ಧವನ್ನು ಮಾಡಲಿಲ್ಲ. ಕರ್ನಾಟಕ ಚುನಾವಣೆಯಲ್ಲಿ ಪ್ರೀತಿ ಮತ್ತು ಸಹೋದರತ್ವದಿಂದ ಹೋರಾಡಿ ಗೆದ್ದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಗೆದ್ದು ಸರ್ಕಾರ ರಚಿಸಲು ಸನ್ನದ್ಧವಾಗಿದ್ದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಕೂಡ ಸಂಭ್ರಮ ಮನೆಮಾಡಿದೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ನಮ್ಮ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ. ಪ್ರೀತಿಯಿಂದ ಜನರನ್ನು ಗೆಲ್ಲಬಹುದು ಎಂದು ಇಂದಿನ ಚುನಾವಣೆ ಫಲಿತಾಂಶ ತೋರಿಸಿಕೊಟ್ಟಿದೆ. ರಾಜ್ಯದ ಜನತೆಗೆ ನನ್ನ ಹೃದಯದಾಳದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕಕ್ಕೆ ನೀಡಿರುವ ಐದು ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದರು.

Umesha HS

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

5 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

5 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

6 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

6 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

6 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

6 hours ago