Categories: ಕರಾವಳಿ

ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ

ಗುರುಪುರ: ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ (ರಿ) ಗುರುಪುರ ಇದರ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವ ಇದರ ಲೋಗೋ ಬಿಡುಗಡೆ ಸಮಾರಂಭ ಮಂಗಳೂರಿನ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು. ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಇನಾಯತ್ ಅಲಿ ಬಿಡುಗ ಡೆಗೊಳಿಸಿದರು. ಕಂಬಳದ ಮೂಲಕ ತುಳುನಾಡಿನ ಸಂಸ್ಕೃತಿ ಎಲ್ಲಡೆ ಪಸರಿಸಲಿ ಎಂದು ಶುಭಾಹಾರೈಸಿದರು.

ಸುರೇಂದ್ರ ಕಂಬಳಿ ಮಾತನಾಡಿ, ತುಳು ನಾಡಿನ ಸಾಂಪ್ರದಾಯಿಕ ಆಚರಣೆಯ ಸಂಕೇತವಾಗಿ ಬಂದ ಕಂಬಳದ ಮೂಲಕ ಇನ್ನಷ್ಟು ವಿಸ್ತರಣೆಯಾಗಲಿ ಎಂದರು.

ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ (ರಿ) ಗುರುಪುರ ಇದರ ಅಧ್ಯಕ್ಷ ರಾಜ್ ಕುಮಾರ್ ಇರುವೈಲ್ ಗುತ್ತು ಸ್ವಾಗತ ಹಾಗೂ ಪ್ರಾಸ್ತಾವಿಕ ಮಾತುಗಳನ್ನಾಡಿದ್ರು.

ಈ ವೇಳೆ ಅಂತರಾಷ್ಟ್ರೀಯ ಕಾರ್ ರೇಸ್ ಪಟು ಅಶ್ವಿನಿ ನಾಯಕ್ , ಉಮೇಶ್ ರೈ ಪದವು ಮೇಗಿನ ಮನೆ,ಮಾಜಿ ಜಿ.ಪಂ ಸದಸ್ಯ ಯು.ಪಿ.ಇಬ್ರಾಹಿಂ,ಗಡಿಕಾರ ಪ್ರಮೋದ್ ರೈ , ಕರಾವಳಿ ಜೋಡುಕರೆ ಕಂಬಳ ಗುರುಪುರ ಸದಸ್ಯರಾದ ಹರೀಶ್ ಭಂಡಾರಿ, ವಿನಯ ಕುಮಾರ್ ಶೆಟ್ಟಿ, ಯಶವಂತ ಶೆಟ್ಟಿ, ಪುರುಷೋತ್ತಮ,ಜಗದೀಶ್ ಆಳ್ವ ಗಿರೀಶ್ ಆಳ್ವ,ಸುನಿಲ್ ಗಂಜಿಮಠ, ಸುಧಾಕರ, ಗುರುಪುರ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಜೇತ್ ನಡೆಸಿಕೊಟ್ಟರು.

Ramya Bolantoor

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

12 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

33 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

39 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

57 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

58 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago