ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಂಗಳೂರು ನಗರ ಸೇರಿ ಗ್ರಾಮಾಂತರ ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಬಂಟ್ಬಾಳ, ಉಳ್ಳಾಲ, ಬೆಳ್ತಂಗಡಿ ಭಾಗದ ಹಲವಡೆ ಭಾರೀ ಮಳೆಯಾಗಿದೆ.
ಇದರಿಂದಾಗಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ನಗರದ ಹಲವು ಭಾಗಗಳಲ್ಲಿ ಮಳೆಗೆ ರಸ್ತೆ ಮೇಲೆ ನೀರು ಹರಿಯುತ್ತಿದೆ. ಗುರುವಾರ ರಾತ್ರಿಯೂ ಮಳೆ ಸುರಿದಿತ್ತು.