Categories: ಕರಾವಳಿ

ಹಿಂದು ಸಮಾಜದ ಮೇಲೆ ಕಾಂಗ್ರೆಸ್‌ ಸವಾರಿ ಮಾಡಿದರೆ ಸುಮ್ಮನಿರಲ್ಲ: ಸಂಸದ ನಳಿನ್‌ ಹೇಳಿಕೆ

ಮಂಗಳೂರು: ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿವೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಆದರೆ ಇಂದು ಇದನ್ನು ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಸಂಸದ ನಳಿನ್‌ ಕುಮಾರ್‌ ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನ ಹೀನಾ ರಾಜಕಾರಣ ಮತ್ತು ಸಿದ್ದರಾಮಯ್ಯ ಮಾನಸಿಕತೆ ಇದರಿಂದ ಬಯಲಾಗಿದೆ. ಒಬ್ಬ ಮುಖ್ಯಮಂತ್ರಿ ಸಾಂವಿಧಾನಿಕವಾಗಿ ಆತನ ಧಾರ್ಮಿಕ ಆಚರಣೆಗೆ ಅಡ್ಡಿ ಬರುವುದು ಸರಿಯಲ್ಲ. ಹಿಂದಿನಿಂದ ನಡೆದುಕೊಂಡು ಬಂದ ಪೂಜೆಗಳನ್ನ ಕೆಲವು ಇಲಾಖೆಗಳಲ್ಲಿ ಮಾಡುತ್ತಾರೆ. ನಂಬಿಕೆಗಳ ಆಧಾರದಲ್ಲಿ ಕೆಎಸ್ಸಾರ್ಟಿಸಿ, ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಮಾಡುತ್ತಾರೆ. ಇಂಥ ಪೂಜೆಗಳನ್ನ‌‌ ನಿಷೇಧಿಸುವ, ಬಹಿಷ್ಕಾರ ಹಾಕುವ ಕ್ರಮ ಸರಿಯಲ್ಲ. ಪೂಜೆ ಮಾಡುವ ಪೊಲೀಸರನ್ನ ಒಂದು ಪಾರ್ಟಿಗೆ ಸೀಮಿತ ಮಾಡುವ ಹೀನ ರಾಜಕಾರಣ ಕಾಂಗ್ರೆಸ್ ನಿಂದ ಆಗುತ್ತಿದೆ. ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಜರಂಗದಳ ನಿಷೇಧವನ್ನು ಉಲ್ಲೇಖ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಹಿಂದೂ ಸಮಾಜದ ಮೇಲೆ ಹೇಗೆ ಸವಾರಿ ಮಾಡುತ್ತದೆ ಎಂಬುದನ್ನು ತೋರಿಸಿದೆ. ಹಿಂದೂ ಆಚರಣೆ ಹಾಗೂ ರಾಷ್ಟ್ರ ಭಕ್ತ ಕಾರ್ಯಕರ್ತರ ಮೇಲೆ ಹೇಗೆ ಸವಾರಿ ಮಾಡುತ್ತದೆ ಎಂಬುದನ್ನು ತೋರಿಸಿದೆ. ಇಂತಹ ಕ್ರಮಗಳ ವಿರುದ್ದ ಹೋರಾಟ ಮಾಡಿ ಉತ್ತರ ಕೊಡುವ ಶಕ್ತಿ ಬಿಜೆಪಿಗಿದೆ. ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ನ ಮಾನಸಿಕತೆಯನ್ನ ವಿರೋಧಿಸುತ್ತೇನೆ. ಸಂಘಟನೆಗಳ ವಿಚಾರಕ್ಕೆ ಕೈ ಹಾಕಿದರೆ ನಾವು ಉತ್ತರ ಕೊಡುತ್ತೇವೆ. ಎಲ್ಲಾ ಇಲಾಖೆಗಳಲ್ಲೂ ರಾಜಕಾರಣ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಅಧಿಕಾರಿಗಳನ್ನ ಕಂಟ್ರೋಲ್ ಮಾಡಿ ಕಾಂಗ್ರೆಸ್ ಅಜೆಂಡಾ ಹೇರುವ ಕೆಲಸ ಮಾಡುತ್ತಿದೆ. ಹಿಂದಿನ ಎಲ್ಲಾ ಜಿಲ್ಲಾಧಿಕಾರಿಗಳು ಒಳ್ಳೆಯ ಕೆಲಸ ಮಾಡಿ ರಾಜ್ಯ ಅಭಿವೃದ್ಧಿ ಆಗಿದೆ. ಇವತ್ತು ಅಂತಹ ಅಧಿಕಾರಿಗಳನ್ನು ಬೆದರಿಸುವ ತಂತ್ರಗಾರಿಕೆಯನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನ ಪ್ರಕಟಿಸಿಯೇ ಪ್ರಕಟಿಸುತ್ತದೆ. ನಾವು ಹೋರಾಟದ ಮೂಲಕ ಕಾಂಗ್ರೆಸ್ ಗೆ ಉತ್ತರ ಕೊಡುತ್ತೇವೆ. ನಾವು ಹಿಂದೂಗಳ ಪರವಾಗಿದ್ದೇವೆ, ಗೋಹತ್ಯೆ ನಿಷೇಧ, ಮತಾಂತರ ನಿಷೇಧದ ಪರವಾಗಿದ್ದೇವೆ. ಹಿಂದೂ ಸಮಾಜಕ್ಕೆ ತೊಂದರೆಯಾದರೆ ಬಿಜೆಪಿ ಹೋರಾಟ ಮಾಡಲಿದೆ ಎಂದರು. ಕಾಂಗ್ರೆಸ್ ಗೆ ಬಹುಮತ ಕೊಟ್ಟರೂ ಗಲಾಟೆ ಮಾಡುತ್ತಿದ್ದಾರೆ. ಇವರು ಸರ್ಕಾರ ಬರುವ ಮೊದಲೇ ಜಗಳ ಮಾಡಿಕೊಂಡು ಬಂದವರು.

ಜನಾಶೀರ್ವಾದ ಸಿಕ್ಕರೂ ಇವರ ಬೀದಿ ಜಗಳ ಜೋರಾಗಿದೆ. ಇನ್ನೂ ಮಂತ್ರಿ ಮಂಡಲ ರಚನೆ ಆಗಿಲ್ಲ, ಇದು ರಚನೆ ಆದ್ರೆ ಕಾಂಗ್ರೆಸ್ ನ ಸ್ಥಿತಿ ಏನಾಗುತ್ತೆ ಕಾದು ನೋಡಿ ಎಂದರು. ನಮ್ಮ 40% ಕಮಿಷನ್ ವಿರುದ್ದ ಇವರು ತನಿಖೆ ಮಾಡಲಿ. ಜೊತೆಗೆ ಸಿದ್ದರಾಮಯ್ಯ ವಿರುದ್ದ ನಾವು ಲೋಕಾಯುಕ್ತಕ್ಕೆ ಕೊಟ್ಟ ದೂರಿನ ತನಿಖೆಯೂ ಆಗಲಿ ಎಂದರು.

Umesha HS

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

38 mins ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

1 hour ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

1 hour ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

2 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

2 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

2 hours ago