Categories: ಕರಾವಳಿ

ಪತ್ರಕರ್ತ ಸೌರಭ ಪ್ರಶಸ್ತಿಗೆ ಜಯಾನಂದ ಪೆರಾಜೆ ಆಯ್ಕೆ

ಬಂಟ್ವಾಳ:  ಹೂವಿನಹಡಗಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಕೊಡಮಾಡುವ ರಾಜ್ಯ ಮಟ್ಟದ ಪತ್ರಕರ್ತ ಸೌರಭ ಪ್ರಶಸ್ತಿ 2023 ಪ್ರಶಸ್ತಿಗೆ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ ಹೂವಿನಹಡಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಯಾನಂದ ಪೆರಾಜೆಯವರು 1986 ರಲ್ಲಿ ಸುದ್ದಿ ಬಿಡುಗಡೆ ವಾರ ಪತ್ರಿಕೆ ಬಂಟ್ವಾಳದಲ್ಲಿ ವರದಿಗಾರರಾಗಿ ಕಾರ್ಯಾರಂಭಿಸಿ ಬಳಿಕ ಹೊಸದಿಗಂತ, ಮುಂಗಾರು, ಸಂಯುಕ್ತ ಕರ್ನಾಟಕ ಕನ್ನಡ ಪ್ರಭ ದಿನಪತ್ರಿಕೆಗಳಲ್ಲಿ ಸುದೀರ್ಘ ಕಾಲ ಬಂಟ್ವಾಳ ತಾಲೂಕು ವರದಿಗಾರರಾಗಿ ಸೇವೆಸಲ್ಲಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಅಂಕಣಕಾರರಾಗಿ, ಕವಿ, ಸಾಹಿತಿಯಾಗಿ ಲೇಖನಗಳನ್ನು ಪ್ರಕಟಿಸಿರುತ್ತಾರೆ. ಹೊಸದಿಗಂತ ಪತ್ರಿಕೆ ವರದಿಗಾರರಾಗಿ ಅರುವ ಅವರು ಪ್ರಸ್ತುತ ಮಧುಪ್ರಪಂಚ ತ್ರೈಮಾಸಿಕ ಪತ್ರಿಕೆಯ ಸಂಪಾದಕರಾಗಿರುತ್ತಾರೆ. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಬರಹಗಾರರ ವೇದಿಕೆಯ ಜಿಲ್ಲಾಧ್ಯಕ್ಷರಾಗಿರುತ್ತಾರೆ. ಫೆ.26ರಂದು ವಿಜಯಪುರದ ಹಂಪಿಯಲ್ಲಿ ನಡೆಯುವ ರಾಜ್ಯ ಸಮ್ಮೇಳನ ಮತ್ತು ಸಾವಿರ ಗೋಷ್ಠಿಯ ಸಂಭ್ರಮ ಕಾಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಮಾಡಲಾಗುವುದು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಜಿಲ್ಲಾ ಘಟಕದ ಸಹಯೋಗದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕಾರ ನಡೆಯಲಿದೆ ಎಂದವರು ತಿಳಿಸಿದ್ದಾರೆ.

Umesha HS

Recent Posts

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

11 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

22 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

33 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

43 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

55 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

1 hour ago