Categories: ಕರಾವಳಿ

ಕರಾವಳಿ ಪ್ರದೇಶಗಳಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆ

ದಕ್ಷಿಣ ಕನ್ನಡ: ಕಳೆದೊಂದು ವಾರದ ಹಿಂದೆ ಉತ್ತರ ಕರ್ನಾಟಕದಲ್ಲಿ ಬರದ ವಾತಾವರಣ ಇತ್ತು. ಆದರೆ ವಾರದಿಂದೀಚೆಗೆ ಬೆಳಗಾವಿ, ಯಾದಗಿರಿ, ಕಲಬುರಗಿ, ಬೀದರ್ ನಲ್ಲಿ ಸುರಿಯುತ್ತಿರುವ ಮಳೆ ಈ ಭಾಗದ ಚಿತ್ರಣವನ್ನೇ ಬದಲಾಯಿಸಿದೆ. ಜು.14ರ ನಂತರ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯ ಪಶ್ಚಿಮಘಟ್ಟ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದ ಗಂಗಾ, ದೂದ್‌ಗಂಗಾ, ಹಿರಣ್ಯಕೇಶಿ, ಮಹದಾಯಿ ಸೇರಿ ಬಹುತೇಕ ನದಿಗಳ ನೀರಿನಮಟ್ಟ ದಿಢೀರ್ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಮೀ ಇರುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆಯಾಗಲಿದೆ. ಬಿರುಗಾಳಿಯು ಗಂಟೆಗೆ 40 ರಿಂಧ 45 ಕಿಮೀ ವೇಗದಲ್ಲಿ ಬೀಸಲಿದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

 

 

Ashitha S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

49 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago